ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಮಟ್ಟದ 3 ಸಹಕಾರ ಸಂಘಗಳ ಸ್ಥಾಪನೆಗೆ ಕೇಂದ್ರ ಸಂಪುಟ ಒಪ್ಪಿಗೆ

Last Updated 11 ಜನವರಿ 2023, 15:35 IST
ಅಕ್ಷರ ಗಾತ್ರ

ನವದೆಹಲಿ: ಸಾವಯವ ಉತ್ಪನ್ನ ಮತ್ತು ಬಿತ್ತನೆ ಬೀಜಗಳ ರಫ್ತನ್ನು ಉತ್ತೇಜಿಸುವ ಉದ್ದೇಶದಿಂದ ರಾಷ್ಟ್ರೀಯ ಮಟ್ಟದ ಮೂರು ಸಹಕಾರ ಸಂಘಗಳನ್ನು ಸ್ಥಾಪಿಸಲು ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಬಹುರಾಜ್ಯ ಸಹಕಾರ ಸಂಘಗಳ ಕಾಯ್ದೆ–2002ರ ಅಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ವೇಳೆ ಪ್ರಧಾನಿ ಮೋದಿ, ಸಹಕಾರ ಸಂಘಗಳ ಸಾಮರ್ಥ್ಯ ಹೆಚ್ಚಿಸಲು ಮತ್ತು ಅವುಗಳನ್ನು ಯಶಸ್ವಿ ಉದ್ಯಮಗಳಾಗಿ ಪರಿವರ್ತಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಸಾವಯವ ಉತ್ಪನ್ನಗಳ ಉತ್ಪಾದನೆ, ಖರೀದಿ, ಸಂಸ್ಕರಣೆ, ಬ್ರ್ಯಾಂಡಿಂಗ್, ಪ್ಯಾಕೇಜಿಂಗ್, ಶೇಖರಣೆ, ಗುಣಮಟ್ಟದ ಬೀಜಗಳ ಮಾರುಕಟ್ಟೆ ಮತ್ತು ವಿತರಣೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಮಟ್ಟದ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸುತ್ತವೆ. ಸ್ಥಳೀಯ ಬಿತ್ತನೆ ಬೀಜಗಳ ಸಂರಕ್ಷಣೆಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಸಹ ಇವುಗಳ ಹೊಣೆಗಾರಿಕೆಯಾಗಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT