ಕಲ್ಲಿದ್ದಲು ಗಣಿ ಯೋಜನೆ: ಸಂತ್ರಸ್ತರಿಗೆ ₹10,000 ಕೋಟಿ ಪರಿಹಾರ ಘೋಷಿಸಿದ ಮಮತಾ

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ದಿಯೋಚ–ಪಚಮಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯ ಸಂತ್ರಸ್ತರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ₹10,000 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ.
ವಿಶ್ವದ ಎರಡನೇ ಅತಿದೊಡ್ಡ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯಾದ ದಿಯೋಚ ಪಚಮಿ ಹರಿಸಿಂಘ ದೇವಾಂಗ್‌ಗಂಜ್‌ಗೆ ಕೆಲ ವರ್ಷಗಳ ಹಿಂದೆ ಸರ್ಕಾರ ಭೂಮಿ ಮಂಜೂರು ಮಾಡಿತ್ತು.
‘ಸಿಂಗೂರ್‌ನಲ್ಲಿ ಆದ ರೀತಿ ಯಾವುದೇ ಘಟನೆ ನಡೆಯಲು ನಾವು ಬಿಡುವುದಿಲ್ಲ. ನಮ್ಮದು ಜನಪರ ಸರ್ಕಾರ. ಒತ್ತಾಯಪೂರ್ವಕವಾಗಿ ಯಾವುದೇ ಕೆಲಸ ಮಾಡುವುದರಲ್ಲಿ ನಮಗೆ ನಂಬಿಕೆ ಇಲ್ಲ’ಎಂದು ಮಮತಾ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಈ ಯೋಜನೆಯಿಂದ ಬಿರ್ಭೂಮ್ ಮತ್ತು ನೆರೆಯ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. 3.4 ಲಕ್ಷ ಎಕರೆಯಲ್ಲಿ ಸಿದ್ಧವಾಗುತ್ತಿರುವ ಯೋಜನೆಗಾಗಿ ರಾಜ್ಯ ಸರ್ಕಾರ ₹ 35,000 ಕೋಟಿ ಹಣವನ್ನು ಹೂಡಿಕೆ ಮಾಡುತ್ತಿದೆ ಎಂದು ಅವರು ಹೇಳಿದ್ಧಾರೆ.
ಗಣಿಗಾರಿಕೆ ಯೋಜನೆಗೆ ಭೂಮಿ ನೀಡಿದವರಿಗೆ ಸರ್ಕಾರ ಆಕರ್ಷಕ ಪ್ಯಾಕೇಜ್ ನೀಡುತ್ತಿದೆ. ಯೋಜನೆಯಿಂದ ಭೂಮಿ ಅಥವಾ ಮನೆ ಕಳೆದುಕೊಂಡ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ ಸಿಗಲಿದೆ. ಸಂತ್ರಸ್ತರಿಗೆ ₹ 10,000 ಕೋಟಿ ಪ್ಯಾಕೇಜ್ ನೀಡಲು ಸರ್ಕಾರ ನಿರ್ಧರಿಸಿದೆ. ಕೃಷಿ ಕಾರ್ಮಿಕರಿಗೂ ಇದರಲ್ಲಿ ಪರಿಹಾರ ಸಿಗಲಿದೆ ಎಂದು ಮಮತಾ ಹೇಳಿದ್ಧಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.