ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಹೆಚ್ಚಳ: ಪ್ರಲ್ಹಾದ್ ಜೋಶಿ

Last Updated 19 ಏಪ್ರಿಲ್ 2022, 19:43 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಸೇರಿ ದೇಶದಲ್ಲಿ ಕಲ್ಲಿದ್ದಲು ಪೂರೈಕೆ ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಸಚಿವಪ್ರಲ್ಹಾದ್ ಜೋಶಿಮಂಗಳವಾರ ತಿಳಿಸಿದರು.

‘ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ಗೆ (ಕೆಪಿಸಿಎಲ್‌ಗೆ) ಏಪ್ರಿಲ್‌ನಲ್ಲಿ 10 ಲಕ್ಷ ಟನ್‌ ಕಲ್ಲಿದ್ದಲು ಪೂರೈಸಲಾಗುವುದು. ಕಲ್ಲಿದ್ದಲು ದಾಸ್ತಾನು ಕರ್ನಾಟಕದಲ್ಲಿ ಶೇ 18ರಷ್ಟು ಹೆಚ್ಚಾಗಿದೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಕೆಪಿಸಿಎಲ್ 2004-2014ರ ಅವಧಿಯಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ 725.49 ಲಕ್ಷ ಮೆಟ್ರಿಕ್ ಟನ್‌ ಪಡೆದಿತ್ತು.ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ, 2015-2022ರ ನಡುವೆ 792.63 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಪಡೆದಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT