ಭಾನುವಾರ, ಜನವರಿ 17, 2021
22 °C

ಛತ್ತೀಸಗಡ: ನಕ್ಸಲ್‌ ದಾಳಿಯಲ್ಲಿ ಕೋಬ್ರಾ ಪಡೆ ಅಧಿಕಾರಿ ಸಾವು, 9 ಕಮಾಂಡೊಗಳಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

PTI photo

ರಾಯ್‌ಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್‌ ದಾಳಿಯಲ್ಲಿ ಸಿಆರ್‌ಪಿಎಫ್‌ನ ಅರಣ್ಯ ಕಾರ್ಯಾಚರಣೆ ಪಡೆ ಕೋಬ್ರಾದ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. 9 ಮಂದಿ ಕಮಾಂಡೊಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ.

ಚಿಂತಲ್‌ನಾರ್ ಅರಣ್ಯ ಪ್ರದೇಶದಲ್ಲಿ ಶನಿವಾರ ರಾತ್ರಿ 9 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ. ಈ ವೇಳೆ ಸಹಾಯಕ ಕಮಾಂಡೆಂಟ್ ನಿತಿನ್ ಭಲೆರಾವ್ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹೆಲಿಕಾಪ್ಟರ್‌ ಮೂಲಕ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳು ಕಮಾಂಡೊಗಳು ಕೋಬ್ರಾ ಪಡೆಯ 206ನೇ ಬೆಟಾಲಿಯನ್‌ಗೆ ಸೇರಿದವು. ಕೋಬ್ರಾ ಕಮಾಂಡೊಗಳು ಮತ್ತು ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು