ಪಣಜಿ: ಗೋವಾದಲ್ಲಿ ಅಧರ್ಮವನ್ನು ತಡೆಯಬೇಕು ಮತ್ತು ರಾಜ್ಯವನ್ನು ಮತ್ತೆ ಧರ್ಮದ ಹಾದಿಗೆ ತರಬೇಕು. ಸಮಾಜಕ್ಕೆ ಪ್ರಯೋಜನವಾಗುವ ರೀತಿಯಲ್ಲಿ ನಡತೆ ಸಂಹಿತೆಯನ್ನು ರೂಪಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗೋವಾಕ್ಕೆ ಅವರು ಎರಡು ದಿನಗಳ ಭೇಟಿಗಾಗಿ ಬಂದಿದ್ದಾರೆ. ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಕ್ಷೇತ್ರ ಅಮೋನಾದಲ್ಲಿ ನಡೆದ ಸಭೆಯಲ್ಲಿ ನಡ್ಡಾ ಮಾತನಾಡಿದರು.

ವಾಲ್‌ಪೋಯಿಯಲ್ಲಿ ನಡೆದ ಪಕ್ಷದ ಇನ್ನೊಂದು ಸಭೆಯಲ್ಲಿಯೂ ನಡ್ಡಾ ಭಾಗವಹಿಸಿದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ನಡ್ಡಾ ಹರಿಹಾಯ್ದರು. ಗೋವಾದಲ್ಲಿ ಅಸ್ತಿತ್ವ ಕಂಡುಕೊಳ್ಳಲು ಎಎಪಿ ಮತ್ತು ತೃಣಮೂಲ ಕಾಂಗ್ರೆಸ್ ಯತ್ನಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.