ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್, ಹರಿಯಾಣಗಳಲ್ಲಿ ತೀವ್ರ ಚಳಿ: ಹವಾಮಾನ ಇಲಾಖೆ ಅಧಿಕಾರಿಗಳು

Last Updated 19 ಡಿಸೆಂಬರ್ 2021, 11:21 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್ ಮತ್ತು ಹರಿಯಾಣಗಳಲ್ಲಿ ತೀವ್ರ ಚಳಿ ವ್ಯಾಪಿಸಿದ್ದು, ಅಮೃತಸರದ ಕನಿಷ್ಠ ಉಷ್ಣಾಂಶ ಮೈನಸ್ 0.5 ಡಿಗ್ರಿ ಸೆಲ್ಸಿಯಸ್ ಆಗಿದೆ.‌

ಎರಡೂ ರಾಜ್ಯಗಳಲ್ಲಿ ರಾತ್ರಿ ತಾಪಮಾನ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ದಾಖಲಾಗಿದೆ. ಅಮೃತಸರ ಮತ್ತು ಲುಧಿಯಾನಾಗಳಲ್ಲಿ ಬೆಳಿಗ್ಗೆ ಸಾಧಾರಣ ಮಂಜು ಕಾಣಿಸಿಕೊಂಡಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‌ನ ಹಲ್ವಾರಾದಲ್ಲಿ ಶೂನ್ಯ ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಭಟಿಂಡಾದಲ್ಲಿ0.1 ಡಿಗ್ರಿ ಸೆಲ್ಸಿಯಸ್, ಫರೀದ್‌ಕೋಟ್‌ನಲ್ಲಿ 1 ಡಿಗ್ರಿ ಸೆಲ್ಸಿಯಸ್‌ ಮತ್ತು ಪಠಾಣ್‌ಕೋಟ್‌ನಲ್ಲಿ ಕನಿಷ್ಠ 1.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಹರಿಯಾಣದ ಸಿರ್ಸಾ ಅತ್ಯಂತ ಶೀತಮಯ ಸ್ಥಳವಾಗಿದ್ದು, ಅಲ್ಲಿ ಕನಿಷ್ಠ ತಾಪಮಾನ 0.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT