ಗುರುವಾರ , ಫೆಬ್ರವರಿ 25, 2021
28 °C

ಕಾಶ್ಮೀರ: ಕನಿಷ್ಠ ತಾಪಮಾನ ಮೈನಸ್‌ 7.6 ಡಿಗ್ರಿ ಸೆಲ್ಸಿಯಸ್‌ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಶ್ರೀನಗರದಲ್ಲಿ ಭಾನುವಾರ ಕನಿಷ್ಠ ತಾಪಮಾನವು ಮೈನಸ್‌ 7.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಇಲ್ಲಿ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಾಶ್ಮೀರದ ‍ಪ್ರಸಿದ್ಧ ದಾಲ್‌ ಸರೋವರ ಹೆಪ್ಪುಗಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿ ತಿಂಗಳ ಮೊದಲ ವಾರದಿಂದಲೇ ಶೀತ ಅಲೆ ಬೀಸುತ್ತಿದೆ. ಅಲ್ಲದೆ ಭಾರೀ ಹಿಮಪಾತದಿಂದಾಗಿ ವಿಮಾನಯಾನ ಮತ್ತು ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟಾಗಿತ್ತು. ಜನವರಿ 13 ಮತ್ತು 14 ರ ಮಧ್ಯರಾತ್ರಿ ಶ್ರೀನಗರದಲ್ಲಿ ಕನಿಷ್ಠ ತಾಪಮಾನವು ಮೈನಸ್‌ 8.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

1893ರಲ್ಲಿ ಕನಿಷ್ಠ ತಾಪಮಾನವು ಮೈನಸ್‌ 14.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಇದು ಈವರೆಗಿನ ಅತಿ ಕನಿಷ್ಠ ತಾಪಮಾನವಾಗಿದೆ.

‘ಕಾಶ್ಮೀರದಲ್ಲಿ ಜನವರಿ 21 ರವರೆಗೆ ಒಣ ಹವೆ ಮುಂದುವರಿಯಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು