ಭಾನುವಾರ, ನವೆಂಬರ್ 28, 2021
20 °C

ಮಹಾರಾಷ್ಟ್ರದಾದ್ಯಂತ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಭೌತಿಕ ತರಗತಿಗಳು ಆರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಮಹಾರಾಷ್ಟ್ರ ರಾಜ್ಯದಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸ್ಥಗಿತಗೊಂಡಿದ್ದ ಭೌತಿಕ ತರಗತಿಗಳು ಬುಧವಾರದಿಂದ ಪುನರಾರಂಭಗೊಂಡಿವೆ.

ಎಲ್ಲಾ ಕೃಷಿಯೇತರ ಕಾಲೇಜುಗಳು, ಸರ್ಕಾರಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು, ಸ್ವ-ಹಣಕಾಸು ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಬುಧವಾರದಿಂದ ಭೌತಿಕ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ.

ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ, ಎರಡೂ ಡೋಸ್‌ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು  ಅವಕಾಶವಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಆನ್‌ಲೈನ್ ಮೂಲಕ ನಡೆಯುವ ತರಗತಿಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಕಾಲೇಜುಗಳು ಆನ್‌ಲೈನ್  ತರಗತಿಗಳನ್ನು ಮುಂದುವರಿಸುತ್ತಿವೆ.

ಮಹಾರಾಷ್ಟ್ರದಲ್ಲಿ 5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅ. 4 ರಿಂದ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ.  ಈಗ ಕಾಲೇಜು–ವಿಶ್ವವಿದ್ಯಾಲಯಗಳಿಗೂ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು