ನವದೆಹಲಿ: ‘ನೂತನ ಕೃಷಿ ಕಾಯ್ದೆಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧ. ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರೈತರಿಗೆ ಶುಕ್ರವಾರ ಮನವಿ ಮಾಡಿದರು.
‘ಕಾಯ್ದೆಗೆ ತರುವ ತಿದ್ದುಪಡಿಗಳು ರೈತರ ಹಿತಾಸಕ್ತಿಯನ್ನು ಕಾಪಾಡಬಲ್ಲವು ಎಂಬುದು ಮನವರಿಕೆಯಾದರೆ, ಆ ಕಾರ್ಯಕ್ಕೂ ಸರ್ಕಾರ ಸಿದ್ಧವಿದೆ’ ಎಂದೂ ಅವರು ಭರವಸೆ ನೀಡಿದರು.
ಇಲ್ಲಿನ ದ್ವಾರಕಾದಲ್ಲಿ ಹಮ್ಮಿಕೊಂಡಿರುವ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ಸ್ವತಃ ನಾನು ಒಬ್ಬ ರೈತನ ಮಗ. ರೈತರ ಕಷ್ಟಗಳ ಅರಿವಿದೆ. ಅಲ್ಲದೇ, ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವ ಕ್ರಮವನ್ನೂ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಳ್ಳುವುದಿಲ್ಲ’ ಎಂದರು.
‘ಒಂದು–ಎರಡು ವರ್ಷಗಳ ಅವಧಿಗಾಗಿ ನೂತನ ಕಾಯ್ದೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು. ಈ ಕಾಯ್ದೆಗಳ ಪ್ರಕಾರವೇ ಕೃಷಿ ಉತ್ಪನ್ನಗಳ ಮಾರಾಟ ಮಾಡಿ. ನಿಮಗೆ ಲಾಭವಾಗುವುದಿಲ್ಲ ಎಂದಾದರೆ, ಈ ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತರಲು ಸರ್ಕಾರ ಸಿದ್ಧ’ ಎಂದೂ ಭರವಸೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.