ಶುಕ್ರವಾರ, ನವೆಂಬರ್ 27, 2020
21 °C

ಡ್ರಗ್ಸ್‌ ಪ್ರಕರಣ: ಹಾಸ್ಯನಟಿ ಭಾರ್ತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾ ಬಂಧನ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ಮುಂಬೈ: ಗಾಂಜಾ ಸಂಗ್ರಹ ಮತ್ತು ಬಳಕೆಯ ಆರೋಪದ ಮೇಲೆ ಹಾಸ್ಯನಟಿ ಭಾರತಿ ಸಿಂಗ್ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಭಾನುವಾರ ಬಂಧಿಸಿದೆ.

ಎನ್‌ಸಿಬಿ ಅಧಿಕಾರಿಗಳು ಶನಿವಾರವಷ್ಟೇ ಹಾಸ್ಯನಟಿ ಭಾರ್ತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಅವರ ನಿವಾಸದ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿ, ಅಲ್ಪಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದರು.

ಹಾಸ್ಯನಟಿಯನ್ನು ಎನ್‌ಡಿಪಿಎಸ್ ಕಾಯ್ದೆ 1986ರ ನಿಬಂಧನೆಗಳ ಅಡಿಯಲ್ಲಿ ಶನಿವಾರ ಬಂಧಿಸಿದ್ದರು.
ಶನಿವಾರದಿಂದ ಹರ್ಷ್ ಲಿಂಬಾಚಿಯಾ ಅವರ ವಿಚಾರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಇಂದು ಮುಂಜಾನೆ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 

ಭಾರತಿ ಮತ್ತು ಅವರ ಪತಿ ಇಬ್ಬರೂ ಗಾಂಜಾ ಸೇವನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಎನ್‌ಸಿಬಿ ಹೇಳಿಕೆಯಲ್ಲಿ ತಿಳಿಸಿದೆ.

ಪೆಡ್ಲರ್‌ರೊಬ್ಬರ ವಿಚಾರಣೆ ವೇಳೆ ಭಾರ್ತಿ ಸಿಂಗ್ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ನಿರ್ಮಾಣ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೆ, ಇನ್ನೂ ಎರಡು ಕಡೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾರ್ತಿ ಸಿಂಗ್ ಅವರು ಹಲವು ಕಾಮಿಡಿ ಮತ್ತು ರಿಯಾಲಿಟಿ ಷೋಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವು ಷೋಗಳನ್ನು ನಡೆಸಿಕೊಡುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು