ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ರಕ್ಷಣೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ: ಯೋಗಿ ಆದಿತ್ಯನಾಥ್

Last Updated 2 ಅಕ್ಟೋಬರ್ 2020, 11:52 IST
ಅಕ್ಷರ ಗಾತ್ರ

ಲಖನೌ: ಮಹಿಳೆಯರಿಗೆ ರಕ್ಷಣೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಹಾಥರಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ.

ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, 'ಉತ್ತರ ಪ್ರದೇಶದಲ್ಲಿ ತಾಯಂದಿರು ಮತ್ತು ಹೆಣ್ಣುಮಕ್ಕಳಿಗೆ ಹಾನಿ ಮಾಡುವ ಬಗ್ಗೆ ಯೋಚಿಸುವವರ ವಿನಾಶ ಖಚಿತವಾಗಿದೆ. ಭವಿಷ್ಯದಲ್ಲಿ ನಿದರ್ಶನ ಆಗಲಿರುವಂತಹಶಿಕ್ಷೆಯನ್ನು ಅವರು ಅನುಭವಿಸುತ್ತಾರೆ. ಎಲ್ಲಾ ತಾಯಂದಿರು ಮತ್ತು ಸಹೋದರಿಯರ ಸುರಕ್ಷತೆಗೆ ಹಾಗೂ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದು ನಾನು ನೀಡುತ್ತಿರುವ ಭರವಸೆ' ಎಂದು ಆದಿತ್ಯನಾಥ್‌ ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹಾಥರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT