ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ, ಸಂತ್ರಸ್ತೆ ಸಾವು: ಲಖೀಂಪುರ ಖೇರಿ ಉದ್ವಿಗ್ನ 

Last Updated 17 ಸೆಪ್ಟೆಂಬರ್ 2022, 14:03 IST
ಅಕ್ಷರ ಗಾತ್ರ

ಲಖೀಂಪುರ ಖೇರಿ, ಉತ್ತರ ಪ್ರದೇಶ: ಇಬ್ಬರು ವ್ಯಕ್ತಿಗಳಿಂದ ಲೈಂಗಿಕ ಕಿರುಕುಳ ಯತ್ನದ ವೇಳೆ ಗಾಯಗೊಂಡುಇಪ್ಪತ್ತು ವರ್ಷದ ಮಹಿಳೆ ಮೃತಪಟ್ಟ ಬಳಿಕ ಇಲ್ಲಿನ ಗ್ರಾಮದಲ್ಲಿ ಕೋಮು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಸಂತ್ರಸ್ತೆ ಮೇಲೆ ಇಬ್ಬರು ಮುಸ್ಲಿಂ ಯುವಕರು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತನ್ನ ಮನೆಯಲ್ಲಿ ಶುಕ್ರವಾರ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆ ಸಾವಿನ ಬಳಿಕ, ಪೊಲೀಸರು ಮೂಲ ಎಫ್‌ಐಆರ್‌ಗೆ ಶಿಕ್ಷಾರ್ಹ ನರಹತ್ಯೆಯ ಆರೋಪಗಳನ್ನು ಸೇರಿಸಿದ್ದಾರೆ. ‌

ಮಹಿಳೆಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಕುಟುಂಬದವರು ನೀಡಿದ ದೂರಿಗೆ ಮನ್ನಣೆ ನೀಡದ ಪೊಲೀಸ್ ಔಟ್‌ಪೋಸ್ಟ್ ಉಸ್ತುವಾರಿಯನ್ನು ಅಮಾನತು ಮಾಡಲಾಗಿದೆ.

‘ಮಹಿಳೆ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ’ ಎಂದು ಖೇರಿ ಪೊಲೀಸ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕುಟುಂಬ ಸದಸ್ಯರು ಆರೋಪಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ನೋಡಿದ ನಂತರ ಎಫ್‌ಐಆರ್‌ನಲ್ಲಿನ ‘ಅಸ್ಪಷ್ಟತೆ’ ಬಗ್ಗೆ ಗೊತ್ತಾಗಿದೆ. ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್ ಅವರಿಗೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT