ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ನೀಟ್‌ ಪರೀಕ್ಷೆ ಪ್ರಕರಣ: ರಾಷ್ಡ್ರೀಯ ಪರೀಕ್ಷಾ ಏಜೆನ್ಸಿ ಸ್ಪಷ್ಟನೆ ಏನು?

Last Updated 19 ಜುಲೈ 2022, 12:32 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ನೀಟ್) ವೇಳೆ ವಿದ್ಯಾರ್ಥಿನಿಗೆ ಒಳ ಉಡುಪು ತೆಗೆದು ನೀಟ್ ಪರೀಕ್ಷೆ ಬರೆಯುವಂತೆ ಸೂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಡ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಸ್ಪಷ್ಟನೆ ನೀಡಿದೆ.

ಈ ಘಟನೆ ಬಗ್ಗೆ ‘ಸುಳ್ಳು‘ ದೂರು ದಾಖಲಾಗಿದ್ದು, ಇದು ದುರುದ್ದೇಶಪೂರ್ವಕ ಎಂದು ಪರೀಕ್ಷಾ ಕೊಠಡಿಯ ಅಧೀಕ್ಷಕ ಹೇಳಿದ್ದಾರೆ ಎಂದುನೀಟ್ ಪರೀಕ್ಷೆ ನಡೆಸುವಎನ್‌ಟಿಎ ತಿಳಿಸಿದೆ. ಈ ಸಂಬಂಧ ನಮಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಎನ್‌ಟಿಎ ಅಧಿಕಾರಿಗಳು ಹೇಳಿದ್ದಾರೆ.

ಕೊಲ್ಲಂ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಯ ನೀಟ್ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್ ಪರೀಕ್ಷೆ ನಡೆಸುತ್ತದೆ. ಅಲ್ಲದೆ ಕಟ್ಟುನಿಟ್ಟಿನ ನಿಯಮ ಪಾಲಿಸಲಾಗುತ್ತದೆ. ಪರೀಕ್ಷೆಗೂ ಮೊದಲು ಸ್ಕ್ರೀನಿಂಗ್ ಸಮಯದಲ್ಲಿ ಬಾಲಕಿಯ ಒಳ ಉಡುಪಿನಲ್ಲಿ ಮೆಟಲ್ ಡಿಟೆಕ್ಟ್ ಆಗಿದ್ದು, ಒಳ ಉಡುಪು ತೆಗೆದ ಬಳಿಕವಷ್ಟೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ ಎನ್ನಲಾಗಿದೆ.

ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕೇರಳದ ಶಿಕ್ಷಣ ಸಚಿವೆ ಆರ್. ಬಿಂದು ಪ್ರತಿಕ್ರಿಯಿಸಿದ್ದಾರೆ. ಕೇರಳ ಮಾನವ ಹಕ್ಕುಗಳ ಆಯೋಗವು ತನಿಖೆಗೆ ಆದೇಶಿಸಿದೆ. ಹಾಗೂಸಚಿವೆ ಆರ್. ಬಿಂದು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದುಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಸಂಬಂಧ ಹಲವು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT