ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನಕ್ಕೆ ಭೇಟಿ ನೀಡಿದ ಮುಸ್ಲಿಂ ಸಚಿವರ ವಿರುದ್ಧ ಬಿಹಾರದಲ್ಲಿ ದೂರು

Last Updated 25 ಆಗಸ್ಟ್ 2022, 5:45 IST
ಅಕ್ಷರ ಗಾತ್ರ

ಪಟನಾ: ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಹಿತಿ ತಂತ್ರಜ್ಞಾನ ಸಚಿವ ಮೊಹಮ್ಮದ್ ಇಸ್ರೇಲ್ ಮನ್ಸೂರಿ ವಿರುದ್ಧ ಬಿಹಾರದ ಮುಜಾಫರ್‌ಪುರದ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಮುಜಾಫರ್‌ಪುರ ಮೂಲದ ಸಾಮಾಜಿಕ ಕಾರ್ಯಕರ್ತ ಚಂದ್ರ ಕಿಶೋರ್ ಎಂಬುವವರು ದೂರು ನೀಡಿದ್ದಾರೆ.

‘ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ’ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

‘ಸನಾತನ ಧರ್ಮವನ್ನು ಅನುಸರಿಸುವವರಿಗೆ ಮಾತ್ರ ವಿಷ್ಣುಪಾದ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿದೆ ಎಂದು ನನ್ನ ಕಕ್ಷಿದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಸಚಿವರು ಮುಸ್ಲಿಂ ಆಗಿರುವುದರಿಂದ ಅಲ್ಲಿಗೆ ಭೇಟಿ ನೀಡಬಾರದು ಎಂಬುದಾಗಿ ಹೇಳಿದ್ದಾರೆ. ಸೆಪ್ಟೆಂಬರ್ 2 ರಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಲಿದೆ’ ಎಂದು ಚಂದ್ರ ಕಿಶೋರ್ ಪರ ವಕೀಲ ರವೀಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.

ಗಯಾದ ವಿಷ್ಣುಪಾದ ದೇವಾಲಯಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭೇಟಿ ನೀಡಿದ್ದರು. ಅವರ ಜೊತೆ ಮನ್ಸೂರಿ ಇದ್ದರು. ದೇವಾಲಯ ಪ್ರವೇಶಿಸುವ ಮೂಲಕ ಹಿಂದೂಗಳ ಭಾವನೆಗಳಿಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT