ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಜ.1 ರವರೆಗೆ ಪಟಾಕಿ ಮಾರಾಟ ನಿಷೇಧಿಸಿ ಡಿಪಿಸಿಸಿ ಆದೇಶ

Last Updated 28 ಸೆಪ್ಟೆಂಬರ್ 2021, 17:42 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಜನವರಿ 1 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಸಿಡಿಸುವುದು ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು (ಡಿಪಿಸಿಸಿ) ಮಂಗಳವಾರ ಆದೇಶಿಸಿದೆ.

ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತದೆ. ಇದು ಭಾರಿ ಸಂಖ್ಯೆಯಲ್ಲಿ ಜನರು ಗುಂಪು ಸೇರಲು ಕಾರಣವಾಗುವುದಲ್ಲದೇ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದಿರುವುದು ಸೇರಿದಂತೆ ಮಾರ್ಗಸೂಚಿಗಳ ಉಲ್ಲಂಘನೆಗೆ ಕಾರಣವಾಗಲಿದೆ. ಇದರಿಂದ ಕೋವಿಡ್‌–19ನ ಮತ್ತೊಂದು ಅಲೆ ಕಾಣಿಸಿಕೊಳ್ಳಬಹುದು ಎಂದು ಹಲವಾರು ತಜ್ಞರು ಎಚ್ಚರಿಕೆ ನೀಡಿದ್ದರು.

ಅಲ್ಲದೇ, ನಗರದಲ್ಲಿ ವಾಯುಮಾಲಿನ್ಯವೂ ಹೆಚ್ಚಿ, ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚಲಿವೆ ಎಂದು ಡಿಪಿಸಿಸಿ ಆದೇಶದಲ್ಲಿ ತಿಳಿಸಿದೆ.

ವಾಯುಮಾಲಿನ್ಯ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಸೋಂಕಿಗೂ ಸಂಬಂಧ ಇದೆ. ಕೋವಿಡ್‌ ಪಿಡುಗಿನ ಈ ಸಮಯದಲ್ಲಿ ಪಟಾಕಿಗಳನ್ನು ಸಿಡಿಸುವುದು ಉಚಿತವಲ್ಲ ಎಂದೂ ಡಿಪಿಸಿಸಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT