ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗದ ವಿರುದ್ಧ ಸಂಘಟಿತ ದಾಳಿ: ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳ ಪತ್ರ

ಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದು ಜನತಂತ್ರದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಮಾಜಿ ಅಧಿಕಾರಿಗಳು
Last Updated 31 ಮಾರ್ಚ್ 2023, 2:29 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರಿಂ ಕೋರ್ಟ್‌ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿರುವ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ವಿರುದ್ದ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಬಹಿರಂಗ ಪತ್ರ ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ ವ್ಯವಸ್ಥೆ ಹಾಗೂ ನ್ಯಾಯಾಂಗ ಸ್ವಾಯತ್ತಯ ಮೇಲೆ ಸಂಘಟಿತ ದಾಳಿ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

90 ಮಂದಿ ಮಾಜಿ ಅಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದು, ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆ ಮಾಡುವುದು ಆಯ್ಕೆಯಲ್ಲ. ಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದು ಜನತಂತ್ರದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಇತ್ತೀಚೆಗೆ ಖಾಸಗಿ ವಾಹಿನಿಯೊಂದು ನಡೆಸಿದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಕಿರಣ್‌ ರಿಜಿಜು ಅವರು ಆಡಿರುವ ಮಾತುಗಳನ್ನು ಉಲ್ಲೇಖಿಸಿ, ಅವುಗಳಿಗೆ ಅಸಹಮತ ವ್ಯಕ್ತಪಡಿಸಿದ್ದಾರೆ. ನಿಮ್ಮ ಈ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಕೊಲಿಜಿಯಂ ರವಾನಿಸಿದ ಹೆಸರುಗಳು ವರ್ಷಗಳ ಕಾಲ ಹಾಗೇ ಇದೆ. ಕೊನೆಗೆ ಅದನ್ನು ಅನುಮೋದನೆಯಿಲ್ಲದೆ ಹಿಂತಿರುಗಿಸಲಾಗುತ್ತದೆ. ಸುಪ್ರೀಂ ಕೋರ್ಟ್‌ ಹಾಗೂ ಕೊಲಿಜಿಯಂ ಜತೆಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಬದಲು, ನೀವು, ಉಪರಾಷ್ಟ್ರಪತಿ ಮುಂತಾದ ಕಾರ್ಯಾಂಗದ ಉನ್ನತ ಮಟ್ಟದ ಅಧಿಕಾರಿಗಳು ವಿಷಪೂರಿತವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದ್ದಾರೆ.

ಕೊಲಿಜಿಯಂ ನೀಡಿದ ಕೆಲವೊಂದು ಹೆಸರನ್ನು ಸ್ವೀಕರಿಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿರುವುದು ನೋಡಿದರೆ, ಸರ್ಕಾರಕ್ಕೆ ವಿಧೇಯ ನ್ಯಾಯಾಂಗ ಸೃಷ್ಠಿ ಮಾಡುವ ಉದ್ದೇಶ ಇದ್ದಂತಿದೆ. ನ್ಯಾಯಾಂಗದ ಸ್ವಾಯತ್ತತೆಯನ್ನು ರಕ್ಷಣೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಹಾಗೂ ತಜ್ಞರು ಬಹಿರಂಗವಾಗಿ ಗಂಭೀರ ಕಾಳಜಿ ವ್ಯಕ್ತಪಡಿಸುತ್ತಿರುವುದು ಅಚ್ಚರಿಯೇನಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿಯ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌, ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ ಪಿಳ್ಳೈ, ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಸುಜಾತ ಸಿಂಗ್‌ ಹಾಗೂ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೆ. ಸುಜಾತ ಸಿಂಗ್‌ ರಾವ್‌ ಸೇರಿ ಒಟ್ಟು 90 ಮಂದಿ ಮಾಜಿ ಅಧಿಕಾರಿಗಳು ಈ ಪತ್ರ ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT