ಗುರುವಾರ , ಜೂನ್ 30, 2022
25 °C

ಕೇರಳ: ಗುರುವಾರ ಮುಂಗಾರು ಪ್ರವೇಶಕ್ಕೆ ವಾತಾವರಣ ಪಕ್ವ: ಐಎಂಡಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೈರುತ್ಯ ಮುಂಗಾರು ಕೇರಳಕ್ಕೆ ಗುರುವಾರ ಪ್ರವೇಶಿಸಲಿದ್ದು, ಅದಕ್ಕೀಗ ವಾತಾವರಣ ಪಕ್ವಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಸಾಮಾನ್ಯವಾಗಿ ಕೇರಳಕ್ಕೆ ಜೂನ್‌ 1ರಂದು ಮುಂಗಾರು ಮಳೆ ಪ್ರವೇಶಿಸುತ್ತಿತ್ತು.

ಉಪಗ್ರಹ ಚಿತ್ರಗಳ ಪ್ರಕಾರ, ಕೇರಳ ಕರಾವಳಿ ಮತ್ತು ಪಕ್ಕದ ಅರಬ್ಬಿ ಸಮುದ್ರದ ಆಗ್ನೇಯ ದಿಕ್ಕಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಇದರಿಂದ ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

‘ಈ ವರ್ಷ ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, 4 ದಿನ ವ್ಯತ್ಯಾಸವೂ ಆಗಬಹುದು’ ಎಂದು ಇಲಾಖೆ ತಿಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು