ಶುಕ್ರವಾರ, ಮೇ 27, 2022
21 °C

ದೇಶದ ಎಲ್ಲ ಮುಖ್ಯಮಂತ್ರಿಗಳು, ನ್ಯಾಯಮೂರ್ತಿಗಳ ಸಮಾವೇಶ ಏ.30 ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಏಪ್ರಿಲ್‌ 30ರಂದು ದೇಶದ ಎಲ್ಲ ಮುಖ್ಯಮಂತ್ರಿಗಳು ಹಾಗೂ ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ತ್ವರಿತ ನ್ಯಾಯ ವಿತರಣೆ, ವ್ಯಾಜ್ಯಗಳ ಬಾಕಿ ಕಡಿತ, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಖಾಲಿ ಹುದ್ದೆಗಳ ವಿಚಾರಗಳು ಚರ್ಚೆಯ ಮುಖ್ಯ ಕಾರ್ಯಸೂಚಿಗಳಾಗಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆದರೆ ಅಧಿಕೃತವಾಗಿ ಸಮಾವೇಶದ ಮುಖ್ಯ ಕಾರ್ಯಸೂಚಿ ಇನ್ನೂ ನಿರ್ಧಾರವಾಗಿಲ್ಲ.

ಈ ಸಮಾವೇಶ 6 ವರ್ಷಗಳ ನಂತರ ನಡೆಯುತ್ತಿದ್ದು, ನ್ಯಾಯಾಂಗವು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಉತ್ತಮ  ವೇದಿಕೆಯಾಗಲಿದೆ. ಏಪ್ರಿಲ್ 24, 2016ರಂದು ದೇಶದ ಎಲ್ಲ ಮುಖ್ಯಮಂತ್ರಿಗಳು ಹಾಗೂ ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ಸಮಾವೇಶ ನಡೆದಿತ್ತು.

ಈ ಬಾರಿಯೂ ಪ್ರಧಾನ ಮಂತ್ರಿಗಳು ಸಮಾವೇಶವನ್ನು ಉದ್ಘಾಟಿಸುವ ನಿರೀಕ್ಷೆಯಿದೆ.

ಕೆಲವು ದಿನಗಳ ಹಿಂದೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ನ್ಯಾಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಭಾರತದ ರಾಷ್ಟ್ರೀಯ ನ್ಯಾಯಾಂಗ ಮೂಲಸೌಕರ್ಯ ಪ್ರಾಧಿಕಾರಕ್ಕೆ ಪ್ರಸ್ತಾವನೆಯೊಂದನ್ನು ಸಲ್ಲಿಸಿದ್ದರು.

ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರವು, ಪ್ರಸ್ತಾವನೆಯನ್ನು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ. ಏಕೆಂದರೆ ಉಚ್ಚ  ಹಾಗೂ ಇತರೆ ನ್ಯಾಯಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಸದನದಲ್ಲಿ ತಿಳಿಸಿತ್ತು. ಆದ್ದರಿಂದ ನ್ಯಾಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಚರ್ಚೆಯು ಈ ಬಾರಿಯ ಸಮಾವೇಶದ ಮುಖ್ಯ ಕಾರ್ಯಸೂಚಿಯಾಗಬಹುದು ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು