ಶುಕ್ರವಾರ, ಆಗಸ್ಟ್ 12, 2022
25 °C

ಆಯೋಧ್ಯೆ ಭೂಮಿ ಖರೀದಿ ಹಗರಣ: ಪ್ರಧಾನಿ, ಸುಪ್ರೀಂ ಮೌನ ಪ್ರಶ್ನಿಸಿದ ಕಾಂಗ್ರೆಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಟ್ರಸ್ಟ್‌ನಿಂದ ಭೂಮಿ ಖರೀದಿಸುವಲ್ಲಿ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್‌ ಮತ್ತೆ ಆರೋಪಿಸಿದೆ. ಕೋರ್ಟ್ ಉಸ್ತುವಾರಿಯಲ್ಲಿ ತನಿಖೆಗೆ ಆದೇಶಿಸುವ ಮೂಲಕ ಸತ್ಯ ಬಯಲಿಗೆಳೆಯಬೇಕಾದ ಹೊಣೆಗಾರಿಕೆ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್ ಮೇಲಿದೆ ಎಂದೂ ತಿಳಿಸಿದೆ.

ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್‌ ಸುರ್ಜೆವಾಲಾ ಅವರು, ಶ್ರೀರಾಮನ ಹೆಸರಿನಲ್ಲಿ ಸಂಗ್ರಹಿಸಿದ್ದ ಹಣವನ್ನು ಲೂಟಿ ಮಾಡುವ ಕಾರ್ಯವನ್ನು ಅಯೋಧ್ಯೆಯ ಬಿಜೆಪಿ ನಾಯಕರು ಮುಂದುವರಿಸಿದ್ದಾರೆ. ಈ ವಿಷಯದಲ್ಲಿ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್ ‘ಮೌನ’ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರೊಬ್ಬರು 890 ಮೀಟರ್ ಭೂಮಿಯನ್ನು ಇದೇ ವರ್ಷದ ಫೆಬ್ರುವರಿಯಲ್ಲಿ ₹20 ಲಕ್ಷಕ್ಕೆ ಖರೀದಿಸಿದ್ದರು. ಇದನ್ನೇ ಟ್ರಸ್ಟ್‌ಗೆ ₹ 2.5 ಕೋಟಿಗೆ ಮಾರಿದ್ದು, 79 ದಿನದಲ್ಲಿ ಶೇ 1250ರಷ್ಟು ಲಾಭ ಮಾಡಿದ್ದಾರೆ ಎಂದು ಆಪಾದಿಸಿದರು.

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರವನ್ನು ಸುಪ್ರೀಂ ಕೋರ್ಟ್‌ ಆದೇಶದಂತೆ ನಿರ್ಮಿಸಲಾಗುತ್ತಿದೆ. ಈ ವಿಷಯದಲ್ಲಿ ಸತ್ಯ ಬಹಿರಂಗ ಪಡಿಸಲು ತನಿಖೆಗೆ ಆದೇಶಿಸುವುದು ಟ್ರಸ್ಟ್ ನಿರ್ಮಾಣ ಮಾಡಿರುವ ಪ್ರಧಾನಮಂತ್ರಿ ಹಾಗೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು