ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ‘ರಾಮದ್ರೋಹ’ ಕಾಂಗ್ರೆಸ್‌ನಿಂದ ವಾಗ್ದಾಳಿ

ಕಾಂಗ್ರೆಸ್‌ ವಕ್ತಾರ ಸುರ್ಜೆವಾಲಾ ಆರೋಪ
Last Updated 20 ಜೂನ್ 2021, 21:52 IST
ಅಕ್ಷರ ಗಾತ್ರ

ನವದೆಹಲಿ: ‘ಬಿಜೆಪಿಯು ‘ರಾಮದ್ರೋಹ’ ಎಸಗಿದೆ’ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡಲು ಸಂಗ್ರಹಿಸಿದ್ದ ನಿಧಿಯನ್ನು ಆಡಳಿತ ಪಕ್ಷವು ಲೂಟಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

‘ಬಿಜೆಪಿ ನಾಯಕರೊಬ್ಬರು 890 ಚದರ ಮೀಟರ್ ಭೂಮಿಯನ್ನು ಇದೇ ವರ್ಷದ ಫೆಬ್ರುವರಿಯಲ್ಲಿ ₹20 ಲಕ್ಷಕ್ಕೆ ಖರೀದಿಸಿದ್ದರು. ಇದನ್ನೇ ರಾಮಜನ್ಮಭೂಮಿ ಟ್ರಸ್ಟ್‌ಗೆ ₹ 2.5 ಕೋಟಿಗೆ ಕೇವಲ 79 ದಿನಗಳ ನಂತರ ಮಾರಾಟ ಮಾಡಿದ್ದಾರೆ’ ಎಂದುಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್‌ ಸುರ್ಜೆವಾಲಾ ಆಪಾದಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ನಿರ್ಮಿಸಲಾಗುತ್ತಿದೆ. ಹೀಗಾಗಿ ವಾಸ್ತವಿಕ ಸ್ಥಿತಿಯನ್ನು ಆಧರಿಸಿ ಈ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ತನ್ನ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ ಎಂದು ಪ್ರತಿಪಾದಿಸಿದರು. ಸಮಾಜವಾದಿ ಪಕ್ಷ ಮತ್ತು ಆಮ್‌ ಅದ್ಮಿ ಪಕ್ಷವು, ವಾರದ ಹಿಂದಷ್ಟೇ ಟ್ರಸ್ಟ್ ವಿರುದ್ಧ ಆರೋಪ ಮಾಡಿದ್ದು, ಭೂಮಿಗೆ ಅತ್ಯಧಿಕ ದರವನ್ನು ನೀಡಲಾಗಿದೆ ಎಂದು ಆರೋಪಿಸಿದ್ದವು. ಅದರ ಹಿಂದೆಯೇ ಕಾಂಗ್ರೆಸ್‌ ಪಕ್ಷವೂ ಆರೋಪ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT