ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಾಶ ಕಾಲೇ ವಿಪರೀತ ಬುದ್ಧಿ: ಬಿಬಿಸಿ ಕಚೇರಿ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಟೀಕೆ

Last Updated 14 ಫೆಬ್ರುವರಿ 2023, 11:27 IST
ಅಕ್ಷರ ಗಾತ್ರ

ನವದೆಹಲಿ: ಬಿಬಿಸಿ ಸಂಸ್ಥೆಯ ನವದೆಹಲಿಯ ಕಚೇರಿಯಲ್ಲಿ ಮಂಗಳವಾರ ಆದಾಯ ತೆರಿಗೆ ಇಲಾಖೆ ತಪಾಸಣೆ ನಡೆಸಿದ್ದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು, ‘ವಿನಾಶ ಕಾಲೇ ವಿಪರೀತ ಬುದ್ಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅದಾನಿ ಸಮೂಹದ ಹಗರಣದ ಬಗ್ಗೆ ನಾವು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಿ ಎಂದು ಕೇಳಿದರೆ ಅವರು (ಕೇಂದ್ರ ಸರ್ಕಾರ) ಬಿಬಿಸಿ ಮೇಲೆ ಐಟಿ ದಾಳಿ ಮಾಡುತ್ತಾರೆ’ ಎಂದು ಟೀಕಿಸಿದ್ದಾರೆ.

ತೆರಿಗೆಗೆ ಸಂಬಂಧಿಸಿದಂತೆ ಹಾಗೂ ಅಂತರರಾಷ್ಟ್ರೀಯ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ಐಟಿ ತಪಾಸಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಈ ವೇಳೆ ಐಟಿ ಅಧಿಕಾರಿಗಳು ಬಿಬಿಸಿ ಕಚೇರಿ ಸಿಬ್ಬಂದಿಯ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬಿಬಿಸಿ ಸಿದ್ಧಪಡಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ತಡೆ ಹಿಡಿದಿರುವುದಕ್ಕೆ ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಯಾವ ಕಾರಣವೂ ಸರಿಯಾಗಿಲ್ಲ, ಸಮಂಜಸವಾಗಿಲ್ಲ ಎಂದು ವಿರೋಧ ಪಕ್ಷಗಳು ಹೇಳಿದ್ದವು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮಾಹಿತಿ ತಂತ್ರಜ್ಞಾನ ನಿಯಮ– 2021ರ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಬಳಸಿ, ಈ ಸಾಕ್ಷ್ಯಚಿತ್ರವನ್ನು ತಡೆಹಿಡಿಯುವಂತೆ ಯೂಟ್ಯೂಬ್‌ಗೆ, ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ವೆಬ್‌ ಕೊಂಡಿಗಳನ್ನು ತಡೆಹಿಡಿಯುವಂತೆ ಟ್ವಿಟರ್‌ಗೆ ಸೂಚನೆ ರವಾನಿಸಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT