ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಧೈರ್ಯಶಾಲಿ ಕುಟುಂಬಕ್ಕೆ ರಾಜಸ್ಥಾನ ಸರ್ಕಾರ ಅಪಮಾನ: ಬಿಜೆಪಿ

Last Updated 10 ಮಾರ್ಚ್ 2023, 15:42 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಯಾವಾಗಲೂ ದೇಶದ ಧೈರ್ಯಶಾಲಿ ಮತ್ತು ಅವರ ಕುಟುಂಬಗಳನ್ನು ಅವಮಾನಿಸಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ.

ರಸ್ತೆಗಳ ನಿರ್ಮಾಣ ಮತ್ತು ಹಳ್ಳಿಗಳಲ್ಲಿ ಸೈನಿಕರ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಆರು ದಿನಗಳಿಂದ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಮನೆ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಮೂವರು ಸಿಆರ್‌ಪಿಎಫ್‌ ಯೋಧರ ಪತ್ನಿಯರನ್ನು ತೆರವುಗೊಳಿಸಿದ್ದನ್ನು ಬಿಜೆಪಿ ಖಂಡಿಸಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ರಾಜ್ಯವರ್ಧನ್ ರಾಥೋಡ್, ತುಷ್ಟೀಕರಣದ ರಾಜಕೀಯ ಮಾಡುವಾಗ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಮತ್ತು ದೇಶದ ನಾಯಕರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದರು.

ಮಹಿಳೆಯರನ್ನು ಶುಕ್ರವಾರ ಮುಂಜಾನೆ ಆಯಾ ವಸತಿ ಪ್ರದೇಶಗಳ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಅವರ ಬೆಂಬಲಿಗರನ್ನು ಜೈಪುರದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಿದರು.

‘ಕಾಂಗ್ರೆಸ್ ಯಾವಾಗಲೂ ಸೇನೆ ಮತ್ತು ವೀರಾಂಗಣ (ಧೈರ್ಯಶಾಲಿ ಮಹಿಳೆಯರು) ಅವರನ್ನು ತಿರಸ್ಕರಿಸಿದೆ. ಸರ್ಜಿಕಲ್ ಸ್ಟ್ರೈಕ್, ಗಾಲ್ವಾನ್ ಕಣಿವೆಯಲ್ಲೂ ರಾಹುಲ್ ಗಾಂಧಿ ಅದನ್ನೇ ಮಾಡಿದರು ಮತ್ತು ಈಗ ರಾಜಸ್ಥಾನ ಕಾಂಗ್ರೆಸ್ ಸರ್ಕಾರವೂ ಅದನ್ನೇ ಮಾಡುತ್ತಿದೆ" ಎಂದು ಅವರು ಹೇಳಿದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಕುಟುಂಬದವರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾರೆ. ವಿಧವೆಯರ ಮೇಲೆ ಲಾಠಿಚಾರ್ಜ್‌ ಮಾಡಲಾಗಿದೆ. ಪ್ರತಿಭಟನಕಾರರ ಕುಟುಂಬದವರನ್ನು ಭೇಟಿಯಾಗಲು ಸಿ.ಎಂಗೆ ಭಯವೇಕೆ? ಗಾಂಧಿ ಕುಟುಂಬದ ಹೆಸರಿನಲ್ಲಿ 400ಕ್ಕೂ ಹೆಚ್ಚು ಯೋಜನೆಗಳಿವೆ. ಆದರೆ, ಹುತಾತ್ಮರ ಪ್ರತಿಮೆ ಸ್ಥಾಪಿಸಲು ಸಾಧ್ಯವಿಲ್ಲವೇ? ಎಂದು ರಾಥೋಡ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT