ಶನಿವಾರ, ಡಿಸೆಂಬರ್ 3, 2022
20 °C

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಹೊರಕ್ಕೆ; ಶಶಿ ತರೂರ್‌ ಹೇಳಿದ್ದೇನು?

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗುಜರಾತ್‌ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಹಿರಿಯ ನಾಯಕ ಶಶಿ ತರೂರ್‌ ಅವರು ಹೆಸರನ್ನು ಕೈಬಿಡಲಾಗಿದೆ. ಈ ಹಿನ್ನೆಲೆ, ಪಕ್ಷದ ವಿದ್ಯಾರ್ಥಿ ಸಂಘಟನೆ ನ್ಯಾಷನಲ್‌ ಸ್ಟೂಡೆಂಟ್ಸ್‌ ಯೂನಿಯನ್‌ ಆಫ್‌ ಇಂಡಿಯಾ (ಎನ್‌ಎಸ್‌ಯುಐ) ಆಹ್ವಾನಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ತರೂರ್‌ ನಿರಾಕರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರನ್ನು ಒಳಗೊಂಡ 40 ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ತರೂರ್‌ ಸ್ಥಾನ ಪಡೆದಿಲ್ಲ. ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಕೈಬಿಟ್ಟಿದ್ದರ ಬಗ್ಗೆ ಬೇಸರವಾಗಿದೆಯೇ ಎಂಬ 'ಪಿಟಿಐ' ಪ್ರಶ್ನೆಗೆ ತರೂರ್‌ ಪ್ರತಿಕ್ರಿಯಿಸಿದ್ದಾರೆ. 'ಚುನಾವಣೆ ಪ್ರಚಾರಕ್ಕೆ ಯಾರು ಉತ್ತಮರು ಅಥವಾ ಯಾವುದು ಉತ್ತಮ ಎಂಬುದು ಕಾಂಗ್ರೆಸ್‌ ಪಕ್ಷಕ್ಕೆ ಗೊತ್ತಿದೆ. ಹಾಗಾಗಿ ಬೇಸರದ ವಿಚಾರವಿಲ್ಲ ಅಪ್ರಸ್ತುತ' ಎಂದು ಶಶಿ ತರೂರ್‌ ಹೇಳಿದ್ದಾರೆ.

ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಪ್ರಮುಖವಾಗಿ ರಾಜಸ್ಥಾನದ ಸಿಎಂ ಅಶೋಕ್‌ ಗೆಹಲೋತ್‌, ಛತ್ತೀಸಗಢದ ಸಿಎಂ ಭೂಪೇಶ್‌ ಬಘೇಲ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕೇರಳದ ಸಿಎಲ್‌ಪಿ ಮುಖಂಡ ರಮೇಶ್‌ ಚೆನ್ನಿತ್ತಾಲ, ಮಾಜಿ ಮುಖ್ಯಮಂತ್ರಿಗಳಾದ ದಿಗ್ವಿಜಯ್‌ ಸಿಂಗ್‌, ಕಮಲ್‌ ನಾಥ್‌, ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ಅಶೋಕ್‌ ಚವಾಣ್‌ ಅವರ ಹೆಸರಿದೆ.

2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ತರೂರ್‌ ಅವರು ಮುಂಬೈ, ಕೋಲ್ಕತ ಮತ್ತು ಚೆನ್ನೈನಲ್ಲಿ ಸ್ಟಾರ್‌ ಪ್ರಚಾರಕರಾಗಿ ಪಾಲ್ಗೊಂಡಿದ್ದರು. 2011, 2016 ಮತ್ತು 2021ರ ಕೇರಳ ವಿಧಾನಸಭೆ ಚುನಾವಣೆಯಲ್ಲೂ ಪಕ್ಷದ ಪರ ಪ್ರಚಾರ ಮಾಡಿದ್ದರು. ಇತ್ತೀಚೆಗೆ ನೊಯಿಡಾದ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು