ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆ: ಲೋಗೊ ಮತ್ತು ವೆಬ್‌ಸೈಟ್‌ ಬಿಡುಗಡೆ ಮಾಡಿದ ಕಾಂಗ್ರೆಸ್‌

Last Updated 24 ಆಗಸ್ಟ್ 2022, 2:29 IST
ಅಕ್ಷರ ಗಾತ್ರ

ನವದೆಹಲಿ: ಸೆಪ್ಟಂಬರ್‌ 7ಕ್ಕೆ ಕನ್ಯಾಕುಮಾರಿಯಿಂದ ಆರಂಭಗೊಳ್ಳಲಿರುವ ಕಾಂಗ್ರೆಸ್‌ ಪಕ್ಷದ ಬೃಹತ್‌ ಪಾದಯಾತ್ರೆ 'ಭಾರತ್‌ ಜೋಡೊ ಯಾತ್ರೆ'ಯ ಲೋಗೊ ಮತ್ತು ವೆಬ್‌ಸೈಟ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಭಾರತ್‌ ಜೋಡೊ ಯಾತ್ರೆ
ಭಾರತ್‌ ಜೋಡೊ ಯಾತ್ರೆ

ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ ಮತ್ತು ರಾಜಕೀಯ ವಿಭಜನೆಗಳಂತಹ ಸಮಸ್ಯೆಗಳ ವಿರುದ್ಧ ಹೋರಾಡಿ ರಾಷ್ಟ್ರವನ್ನು ಒಗ್ಗೂಡಿಸುವ ಉದ್ದೇಶದಿಂದ ಯಾತ್ರೆ ಕೈಗೊಂಡಿರುವುದಾಗಿ ಕಾಂಗ್ರೆಸ್‌ ತಿಳಿಸಿದೆ. ಈ ಪಾದಯಾತ್ರೆಯು ಕಾಶ್ಮೀರದವರೆಗೆ ಸಾಗಲಿದೆ.

ಪಾದಯಾತ್ರೆ ಮೂಲಕ ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಪುನಃಶ್ಚೇತನಗೊಳಿಸಲು ಕಾಂಗ್ರೆಸ್‌ ಹುರುಪಿನಿಂದ ಸಿದ್ಧತೆ ನಡೆಸುತ್ತಿದೆ. ಸ್ವಾತಂತ್ರ್ಯದ ನಂತರದ ಬೃಹತ್‌ ಪಾದಯಾತ್ರೆ ಇದಾಗಲಿದೆ ಎಂದು ಕಾಂಗ್ರೆಸ್‌ ಬಣ್ಣಿಸಿದೆ.

ಪಾದಯಾತ್ರೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಭಾರತ್‌ ಜೋಡೊ ಯಾತ್ರೆಯು ದಕ್ಷಿಣದ ಕನ್ಯಾಕುಮಾರಿಯಿಂದ ಆರಂಭಗೊಂಡು ಉತ್ತರದ ಕಾಶ್ಮೀರದ ವರೆಗೆ ಸುಮಾರು 3,570 ಕಿ.ಮೀ. ದೂರವನ್ನು ಕ್ರಮಿಸಲಿದೆ. ಸೆಪ್ಟಂಬರ್‌ 7ಕ್ಕೆ ಯಾತ್ರೆಗೆ ಚಾಲನೆ ಸಿಗಲಿದ್ದು, ಪೂರ್ಣಗೊಳ್ಳಲು ಸುಮಾರು 5 ತಿಂಗಳ ಅವಧಿಯನ್ನು ತೆಗೆದುಕೊಳ್ಳಲಿದೆ ಎಂದರು.

ಪಾದಯಾತ್ರೆಯು 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹಾದು ಹೋಗಲಿದೆ. ಜೊತೆಯಲ್ಲೇ ಇತರೆ ರಾಜ್ಯಗಳಲ್ಲೂ 'ಭಾರತ್‌ ಜೋಡೊ ಯಾತ್ರೆ'ಯನ್ನು ಪ್ರಾದೇಶಿಕವಾಗಿ ನಡೆಸಲಾಗುವುದು ಎಂದು ಜೈರಾಮ್‌ ರಮೇಶ್‌ ತಿಳಿಸಿದರು.

ತಮಿಳುನಾಡಿನ ಕನ್ಯಾಕುಮಾರಿಯಿಂದ ಯಾತ್ರೆ ಆರಂಭಗೊಳ್ಳಲಿದೆ. ಬಳಿಕ ತಿರುವನಂತಪುರ, ಕೊಚ್ಚಿ, ನೀಲಂಬೂರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್‌, ನಾಂದೇಡ್‌, ಜಲಗಾಂವ್‌, ಇಂಧೋರ್‌, ಕೋಟಾ, ದೌಸಾ, ಅಳ್ವಾರ್‌, ಬುಲಂದಶಹರ್‌, ದೆಹಲಿ, ಅಂಬಾಲಾ, ಪಠಾಣ್‌ಕೋಟ್‌, ಜಮ್ಮು ಬಳಿಕ ಕಾಶ್ಮೀರದಲ್ಲಿ ಸಮಾಪ್ತಿಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT