ನವದೆಹಲಿ: ಹರಿಯಾಣದ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಕೂಡಲೇ ಕ್ವಾರಂಟೈನ್ ಆಗಿ ಮತ್ತು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟಿಸಿದ್ದಾರೆ.
'ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸೂಚನೆಯಂತೆ ಉಳಿದ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲಾಗುತ್ತಿದೆ. ನಿಮ್ಮ ಆಶೀರ್ವಾದದಿಂದಾಗಿ ನಾನು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಕಳೆದ ಐದು ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ಅವರು ಕೂಡಲೇ ಪ್ರತ್ಯೇಕವಾಗಿರಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.