ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ ಮುತ್ಸದ್ಧಿ ಮೋತಿಲಾಲ್‌ ವೊರಾ ನಿಧನ

Last Updated 21 ಡಿಸೆಂಬರ್ 2020, 11:31 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಮೋತಿಲಾಲ್‌ ವೊರಾ (93) ಅವರು ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಮೂತ್ರ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ವೊರಾ ಅವರನ್ನು ಕೆಲ ದಿನಗಳ ಹಿಂದೆ ವೊಖ್ಲಾದಲ್ಲಿರುವ ಎಸ್ಕಾರ್ಟ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ ನೆರವಿನೊಂದಿಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ನಿಧನರಾಗಿದ್ದಾರೆ.

ಸೋಮವಾರ ರಾತ್ರಿ ಇಲ್ಲವೇ ಮಂಗಳವಾರ ಬೆಳಿಗ್ಗೆ ಅವರ ಮೃತದೇಹವನ್ನು ಚಂಡೀಗಡಕ್ಕೆ ಕೊಂಡೊಯ್ದು ಅಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ಹೇಳಿದ್ದಾರೆ.

1985 ರಿಂದ 1989ರವರೆಗೂ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೊರಾ ಅವರು ಈ ವರ್ಷದ ಏಪ್ರಿಲ್‌ವರೆಗೂ ರಾಜ್ಯಸಭಾ ಸದಸ್ಯರಾಗಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ (ಆಡಳಿತ) ಕೆಲಸ ಮಾಡಿದ್ದರು.

ವೊರಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT