ಭಾನುವಾರ, ಸೆಪ್ಟೆಂಬರ್ 19, 2021
30 °C

ಕಾಂಗ್ರೆಸ್‌ ತೊರೆದ ಹಿರಿಯ ನಾಯಕಿ ಸುಷ್ಮಿತಾ ದೇವ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಲವು ವರ್ಷಗಳ ಕಾಲ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಮಹಿಳಾ ಘಟಕವನ್ನು ಮುನ್ನಡೆಸಿದ್ದ, ಮಾಜಿ ಸಂಸದೆ, ಕಾಂಗ್ರೆಸ್ ಪಕ್ಷದ ನಾಯಕಿ ಸುಷ್ಮಿತಾ ದೇವ್ ಪಕ್ಷ ತೊರೆದಿದ್ದು, ಭಾನುವಾರ ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಷ್ಮಿತಾ ದೇವ್ ಅವರು ಪಕ್ಷ ತೊರೆದಿರುವುದಕ್ಕೆ ಕಾರಣ ತಿಳಿಸಿಲ್ಲ. ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ, ‘ಸಾರ್ವಜನಿಕ ಸೇವೆಯಲ್ಲಿ ಹೊಸ ಅಧ್ಯಾಯವೊಂದನ್ನು ಆರಂಭಿಸುತ್ತಿದ್ದೇನೆ‘ ಎಂದು ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.

ಇದೇ ವೇಳೆ ಸುಷ್ಮಿತಾ ಅವರು, ತಮ್ಮ ಟ್ವಿಟರ್‌ ಖಾತೆಯ ಸ್ಟೇಟಸ್‌ನಲ್ಲಿ ‘ಕಾಂಗ್ರೆಸ್‌ನ ಮಾಜಿ ಸದಸ್ಯೆ ಹಾಗೂ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ‘ ಎಂದು ಬದಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು