ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಟಿಎಂಸಿ ಸಭೆ: ಕಾಂಗ್ರೆಸ್‌ ಭಾಗಿಯಾಗುವ ಸಾಧ್ಯತೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿರುವ ಸಭೆ
Last Updated 14 ಜೂನ್ 2022, 13:57 IST
ಅಕ್ಷರ ಗಾತ್ರ

ನವದೆಹಲಿ:ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಷಯವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕರೆದಿರುವ ಸಭೆಯಲ್ಲಿ ಕಾಂಗ್ರೆಸ್‌ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಪರವಾಗಿ ಕಾಂಗ್ರೆಸ್‌ ಹಿರಿಯ ಮುಖಂಡ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್‌ ರಮೇಶ್‌, ರಣದೀಪ್‌ ಸುರ್ಜೇವಾಲಾ ಅವರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿವೆ.

ಮಮತಾ ಬ್ಯಾನರ್ಜಿ ಜೂನ್‌ 15ರಂದು ದೆಹಲಿಯಲ್ಲಿ ಸಭೆ ಕರೆದಿದ್ದು, ಹಲವು ವಿರೋಧ ಪಕ್ಷಗಳು ಭಾಗಿಯಾಗುವ ಸಾಧ್ಯತೆ ಇದೆ.ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT