ಭಾನುವಾರ, ಏಪ್ರಿಲ್ 11, 2021
27 °C

ಮಹಾರಾಷ್ಟ್ರ: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೈಕಲ್‌ ರ‍್ಯಾಲಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಇಂಧನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್‌ನ‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ವಿಧಾನ ಭವನದ ಮುಂದೆ ಸೋಮವಾರ ಸೈಕಲ್‌ ರ‍್ಯಾಲಿ ನಡೆಸಿದರು.

ಮಹಾರಾಷ್ಟ್ರ ವಿಧಾನಸಭೆಯ ‌ಬಜೆಟ್‌ ಅಧಿವೇಶನ ಸೋಮವಾರ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಚಿವರುಗಳಾದ ಬಾಳಸಾಹೇಬ್‌ ಥೋರಟ್‌, ಅಸ್ಲಂ ಶೇಖ್, ಯಶೋಮತಿ ಠಾಕೂರ್ ಮತ್ತು ಮುಂಬೈನ ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ಅಲಿಯಾಸ್ ಭಾಯ್ ಜಗ್ತಾಪ್ ಅವರು ಬಜೆಟ್‌ ಅಧಿವೇಶನ ಆರಂಭಕ್ಕೂ ಮುನ್ನ ಸೈಕಲ್‌ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಸಚಿವಾಲಯದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ನಾನಾ ಪಟೋಲೆ ಅವರು,‘ ಕೇಂದ್ರ ಸರ್ಕಾರವು ಇಂಧನ ಬೆಲೆ ಏರಿಕೆ ಮೂಲಕ ಜನರ ಬಾಯಿಯಿಂದ ಆಹಾರವನ್ನು ಕಸಿದುಕೊಳ್ಳುತ್ತಿದೆ. ಈ ಮೂಲಕ ಕೇಂದ್ರ ‘ಪಾಪ’ ಮಾಡುತ್ತಿದೆ’ ಎಂದು ದೂರಿದರು.

‘ಚಳಿಗಾಲದಲ್ಲಿ ಇಂಧನದ ಬೆಲೆ ಕಡಿಮೆಯಾಗುತ್ತದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳ ಮೂಲಕ ಅವರು ಜನರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಇಂಧನ ಬೆಲೆ ಏರಿಕೆಯ ಬಗ್ಗೆ ಜನರಿಗೆ ಬಹಳಷ್ಟು ಕೋಪವಿದೆ’ ಎಂದು ಅವರು ಹೇಳಿದರು.

‘ಕಾಂಗ್ರೆಸ್‌ ನಾಯಕರು ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಸಚಿವಾಲದಿಂದ ವಿಧಾನ ಭವನದ ತನಕ ಸೈಕಲ್‌ ರ‍್ಯಾಲಿ ನಡೆಸಿದರು ’ಎಂದು ಅವರು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು