ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಬೆಂಬಲ; ಸಂಸತ್ ಭವನದ ಆವರಣದಲ್ಲಿ ಕಾಂಗ್ರೆಸ್ ಸಂಸದರ ಪ್ರತಿಭಟನೆ

Last Updated 22 ಜುಲೈ 2021, 7:21 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಸಂಸತ್ ಭವನದ ಆವರಣದಲ್ಲಿ ಕಾಂಗ್ರೆಸ್ ಸಂಸದರು ಗುರುವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.

ಸಂಸತ್ ಭವನದ ಆವರದಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಜಮಾಯಿಸಿದ ಉಭಯ ಸದನಗಳ ಕಾಂಗ್ರೆಸ್ ಸಂಸದರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಕೇಂದ್ರದ ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ಕಳೆದ ಎಂಟು ತಿಂಗಳಿಂದ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ನವದೆಹಲಿಯ ಸಂಸತ್ತಿನ ಸಮೀಪ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು 200 ಮಂದಿಗೆ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT