ಗುರುವಾರ , ಡಿಸೆಂಬರ್ 1, 2022
20 °C

ದೊಡ್ಡ ಬದಲಾವಣೆಗಾಗಿ ಹೋರಾಟ; ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಬದಲಾವಣೆಗಾಗಿ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಕಾಂಗ್ರೆಸ್‌ನ ಎಲ್ಲ ಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: 

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲ ರಾಜ್ಯಗಳ ನಾಯಕರಿಗೆ ಧನ್ಯವಾದಗಳು ಎಂದು ಹೇಳಿದರು.

ಖರ್ಗೆ ಉಮೇದುವಾರಿಕೆಯನ್ನು ಹಿರಿಯ ನಾಯಕರಾದ ಅಶೋಕ್ ಗೆಹಲೋತ್, ದಿಗ್ವಿಜಯ್ ಸಿಂಗ್, ಪ್ರಮೋದ್ ತಿವಾರಿ, ಪಿಎಲ್ ಪುನಿಯಾ, ಎ.ಕೆ. ಆ್ಯಂಟನಿ, ಪವನ್ ಕುಮಾರ್ ಬನ್ಸಲ್ ಮತ್ತು ಮುಕುಲ್ ವಾಸ್ನಿಕ್ ಪ್ರತಿಪಾದಿಸಿದ್ದರು.

ಜಿ23 ನಾಯಕರಾದ ಆನಂದ್ ಶರ್ಮಾ ಮತ್ತು ಮನೀಶ್ ತಿವಾರಿ ಸಹ ಬೆಂಬಲ ಸೂಚಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಬಳಿಕ ಅ.19ರಂದು ಫಲಿತಾಂಶ ಹೊರಬೀಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು