ಭಾನುವಾರ, ನವೆಂಬರ್ 27, 2022
26 °C
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ:ತ್ರಿಪಾಠಿ ನಾಮಪತ್ರ ತಿರಸ್ಕೃತ– ಖರ್ಗೆ vs ತರೂರ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಹೀಗಾಗಿ, ಅಂತಿಮ ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರ್ ಉಳಿದಿದ್ದು, ಇವರಿಬ್ಬರ ನಡುವೆ ಪೈಪೋಟಿ ಏರ್ಪಡಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರ ಖರ್ಗೆ, ತರೂರ್ ಮತ್ತು ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದರು.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ನಾಮಪತ್ರ ಸಲ್ಲಿಸುವಾಗ ಒಟ್ಟು 20 ಫಾರ್ಮ್‌ಗಳು ಬಂದಿದ್ದು, ಅವುಗಳಲ್ಲಿ ನಾಲ್ಕು ತಿರಸ್ಕೃತವಾಗಿವೆ ಎಂದು ಹೇಳಿದರು.

ಖರ್ಗೆ 14 ಫಾರ್ಮ್‌ಗಳನ್ನು ಸಲ್ಲಿಸಿದರೆ, ತರೂರ್ ಐದು ಮತ್ತು ತ್ರಿಪಾಠಿ ಒಂದು ಫಾರ್ಮ್ ಅನ್ನು ಸಲ್ಲಿಸಿದ್ದರು.

ಸಹಿ ಹೊಂದಿಕೆಯಾಗದ ಕಾರಣ ತ್ರಿಪಾಠಿ ಅವರ ಸೂಚಕರ ಫಾರ್ಮ್ ಅನ್ನು ತಿರಸ್ಕರಿಸಲಾಗಿದೆ ಎಂದು ಮಿಸ್ತ್ರಿ ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು