ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Congress President Polls: ಮತ ಎಣಿಕೆ ಆರಂಭ, ಮೂರು ರಾಜ್ಯಗಳಲ್ಲಿ ಅಕ್ರಮ ಆರೋಪ

Last Updated 19 ಅಕ್ಟೋಬರ್ 2022, 6:32 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.

ಈ ಮಧ್ಯೆ ಮೂರು ರಾಜ್ಯಗಳ ಮತದಾನದಲ್ಲಿ ಅಕ್ರಮ ನಡೆದಿದೆ ಎಂದು ತರೂರ್ ಬಣ ಆರೋಪಿಸಿರುವುದಾಗಿ ವರದಿಯಾಗಿದೆ. ಉತ್ತರ ಪ್ರದೇಶ, ಪಂಜಾಬ್, ತೆಲಂಗಾಣದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಮಧ್ಯೆ, ಯಾರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಲಿದ್ದಾರೆ ಎಂಬುದು ಇಂದು ತೀರ್ಮಾನವಾಗಲಿದೆ.

ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ಸುಮಾರು 10.20ಕ್ಕೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು.

ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಪ್ರಾಧಿಕಾರ ಅಧ್ಯಕ್ಷ ಮಧುಸೂದನ್ ಮಿಸ್ಟ್ರಿ ಅವರ ಮೇಲ್ನೋಟದಲ್ಲಿ ಮತ ಎಣಿಕೆ ನಡೆಯುತ್ತಿದೆ.

ದೇಶದೆಲ್ಲೆಡೆ 68 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಬ್ಯಾಲೆಟ್ ಬಾಕ್ಸ್‌ಗಳನ್ನು ಸ್ಟ್ರಾಂಗ್ ರೂಮ್‌ನಲ್ಲಿ ಭದ್ರವಾಗಿರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT