ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್‌

Last Updated 5 ಆಗಸ್ಟ್ 2022, 20:45 IST
ಅಕ್ಷರ ಗಾತ್ರ

ನವದೆಹಲಿ:ಬೆಲೆ ಏರಿಕೆಯನ್ನು ಖಂಡಿಸಿ ರಾಷ್ಟ್ರಪತಿ ಭವನದತ್ತ ಶುಕ್ರವಾರ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್‌ ಸಂಸದರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು, ಅವರನ್ನು 6 ಗಂಟೆಗೂ ಹೆಚ್ಚು ಕಾಲ ಠಾಣೆಯಲ್ಲಿ ಇರಿಸಿದ್ದರು. ಸಂಜೆಯ ನಂತರ ಬಿಡುಗಡೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾಂಗ್ರೆಸ್‌ ಯೋಜನೆಯನ್ನೂ ಪೊಲೀಸರು ಈ ಮೂಲಕ ತಡೆದರು.ದೆಹಲಿ ‍ಪೊಲೀಸರ ಈ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌, ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನೂ ಬಿಜೆಪಿ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು.

‘ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಹೀಗಿದ್ದೂ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು. 65 ಸಂಸದರೂ ಸೇರಿ, 335 ಜನರನ್ನು ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿತ್ತು. ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಯಿತು’ ಎಂದು ದೆಹಲಿ ಪೊಲೀಸರ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ದೇಶದಾದ್ಯಂತಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT