ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಯಾತ್ರೆಯಲ್ಲೇ ಸಂಸದ ನಿಧನ: ಭಾರತ ಜೋಡೊ ಯಾತ್ರೆ 24 ಗಂಟೆ ಸ್ಥಗಿತ

Last Updated 14 ಜನವರಿ 2023, 7:26 IST
ಅಕ್ಷರ ಗಾತ್ರ

ಚಂಡೀಗಢ: ಪಾದಯಾತ್ರೆಯ ವೇಳೆಯೇ ಹೃದಯಾಘಾತದಿಂದ ಕೊನೆಯುಸಿರೆಳೆದ ಪಕ್ಷದ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಗೌರವಾರ್ಥವಾಗಿ ಭಾರತ್ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಶನಿವಾರ ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದೆ. ಸದ್ಯ ಯಾತ್ರೆಯು ಪಂಜಾಬ್‌ನಲ್ಲಿ ಸಾಗುತ್ತಿದೆ.

ಜತೆಗೆ, ರಾಹುಲ್ ಗಾಂಧಿ ಅವರು ಜನವರಿ 15 ರಂದು ಜಲಂಧರ್‌ನಲ್ಲಿ ನಿಗದಿಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ. ಆ ಪತ್ರಿಕಾಗೋಷ್ಠಿ ಜ. 17ಕ್ಕೆ ಹೋಶಿಯಾರ್‌ಪುರದಲ್ಲಿ ನಿಗದಿಯಾಗಿದೆ.

ಇಂದು ಬೆಳಗ್ಗೆ ನಿಧನರಾದ ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಭಾರತ್ ಜೋಡೋ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುವುದು. ನಾಳೆ ಮಧ್ಯಾಹ್ನ ಜಲಂಧರ್‌ನ ಖಾಲ್ಸಾ ಕಾಲೇಜು ಮೈದಾನದಿಂದ ಯಾತ್ರೆ ಪುನರಾರಂಭವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

'ನಾಳೆ ಜಲಂಧರ್‌ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿಯವರ ಪತ್ರಿಕಾಗೋಷ್ಠಿಯನ್ನು ಜನವರಿ 17 ರಂದು ಹೋಶಿಯಾರ್‌ಪುರದಲ್ಲಿ ನಡೆಸಲಾಗುವುದು’ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪಂಜಾಬ್‌ನ ಜಲಂಧರ್ ಕ್ಷೇತ್ರದ ಕಾಂಗ್ರೆಸ್‌ ಸಂಸದ ಸಂತೋಖ್‌ ಚೌಧರಿ ಅವರು ಶನಿವಾರ ಭಾರತ್ ಜೋಡೋ ಯಾತ್ರೆಯ ವೇಳೆ ಕುಸಿದುಬಿದ್ದರು. ನಂತರ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಭಾರತ್ ಜೋಡೋ ಯಾತ್ರೆ ಶನಿವಾರ ಬೆಳಗ್ಗೆ ಪಂಜಾಬ್‌ನ ಲಾಧೋವಲ್‌ನಿಂದ ಆರಂಭಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT