ಬುಧವಾರ, ಫೆಬ್ರವರಿ 1, 2023
27 °C

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖವಾಗಿ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಎತ್ತಿ ಹಿಡಿಯಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: 

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರೇ ಮುಂದುವರಿಯಬೇಕು ಮತ್ತು ರಾಷ್ಟ್ರವ್ಯಾಪಿ ಆಂದೋಲನವನ್ನು ಮುನ್ನಡೆಸಬೇಕು ಎಂಬ ಅಭಿಪ್ರಾಯ ಮೂಡಿಬಂದಿದೆ ಎನ್ನಲಾಗಿದೆ.

ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಪ್ರತಿಭಟನೆ ಸಮಯದಲ್ಲಿ ಉಲ್ಲೇಖಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ದಿಗ್ವಿಜಯ ಸಿಂಗ್ ಅಧ್ಯಕ್ಷತೆಯ ಸಮಿತಿಯು ಸಮಸ್ಯೆಗಳನ್ನು ಪಟ್ಟಿ ಮಾಡಿ ಯೋಜನೆಯನ್ನು ಸಿದ್ಧಪಡಿಸಲಿವೆ. ಬಳಿಕ ಅಂತಿಮ ಒಪ್ಪಿಗಾಗಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ವರದಿಯನ್ನು ಸಲ್ಲಿಸುತ್ತಾರೆ ಎಂದು ತಿಳಿಸಿವೆ.

ರಾಷ್ಟ್ರವ್ಯಾಪಿ ಆಂದೋಲನ ಯಶಸ್ವಿಗೊಳಿಸಲು ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಬೇಕು ಎಂದು ಸಮಿತಿ ಸದಸ್ಯರಾದ ರಿಪುನ್ ಬೋರಾ ಹಾಗೂ ಉದಿತ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಸಂಘಟನೆಗಳು ಆಂದೋಲನದಲ್ಲಿ ಭಾಗವಹಿಸಬೇಕು. ಇದರಿಂದ ಹೆಚ್ಚಿನ ಯಶಸ್ಸು ಸಿಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡಾ ಸಭೆಯಲ್ಲಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು