ಚುನಾವಣೆಯಲ್ಲಿ ಗೆದ್ದರೆ ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ: ಪ್ರಿಯಾಂಕಾ ಗಾಂಧಿ

ಶಿಮ್ಲಾ: ‘ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನ ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗುವುದು’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಹೇಳಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಪ್ರಿಯಾಂಕಾ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ‘ಹಳೆಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಮೂಲಕ ಬಿಜೆಪಿಯು ವೃದ್ಧರ ಆರ್ಥಿಕ ಭದ್ರತೆಯನ್ನು ಕಸಿದುಕೊಂಡಿದೆ’ ಎಂದು ಆರೋಪಿಸಿದ್ದಾರೆ.
‘ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರತಿಯೊಬ್ಬ ಉದ್ಯೋಗಿಯು ಪಿಂಚಣಿ ಪಡೆಯಬೇಕೆಂದು ಕಾಂಗ್ರೆಸ್ ನಂಬುತ್ತದೆ. ಪಿಂಚಣಿ ಪ್ರತಿ ಉದ್ಯೋಗಿಯ ಹಕ್ಕು. ಇದನ್ನು ಗಮನದಲ್ಲಿರಿಸಿಕೊಂಡೇ ಛತ್ತೀಸಗಡ ಹಾಗೂ ರಾಜಸ್ಥಾನದ ಕಾಂಗ್ರೆಸ್ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿವೆ’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.