ಗುರುವಾರ , ಮೇ 19, 2022
23 °C

ಕಾರಿನ ಗ್ಲಾಸ್‌ ಸ್ವಚ್ಛಗೊಳಿಸಿದ ಪ್ರಿಯಾಂಕಾ ಗಾಂಧಿ: ವಿಡಿಯೊ ವೈರಲ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ರಾಮ್‌ಪುರ (ಉತ್ತರ ಪ್ರದೇಶ): ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ರಾಮ್‌ಪುರಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಕಾರುಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಮಂಜು ಆವೃತವಾಗಿ, ರಸ್ತೆ ಅಸ್ಪಷ್ಟವಾಗಿದ್ದರಿಂದ ಈ ಘಟನೆ ನಡೆದಿದೆ.  

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ರಸ್ತೆ ಸ್ಪಷ್ಟವಾಗಿ ಕಾಣದ ಕಾರಣಕ್ಕೆ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ಕೆಲಕಾಲ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ತಮ್ಮ ಕಾರಿನ ಗಾಜಿನ ಮೇಲಿದ್ದ ದೂಳನ್ನು ಸ್ವತಃ ಪ್ರಿಯಾಂಕಾ ಗಾಂಧಿ ಅವರೇ ಒರೆಸಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ತಾಣಗಗಳಲ್ಲಿ ವೈರಲ್‌ ಆಗಿದೆ.

ಮೃತ ರೈತನ ಕುಟಂಬಸ್ಥರ ಭೇಟಿ

ಜನವರಿ 26ರಂದು ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟಿದ್ದ ಉತ್ತರ ಪ್ರದೇಶದ ರಾಮ್‌ಪುರದ ರೈತನ ನಿವಾಸಕ್ಕೆ ಪ್ರಿಯಾಂಕಾ ಗುರುವಾರ ಭೇಟಿ ನೀಡಿದ್ದರು. ಕುಟುಂಬಸ್ಥರಿಗೆ ಅವರು ಸಾಂತ್ವನ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು