ಶನಿವಾರ, ಮೇ 28, 2022
27 °C

ಕಾಂಗ್ರೆಸ್‌ನಲ್ಲಿನ್ನು ಒಂದು ಕುಟುಂಬ, ಒಂದೇ ಟಿಕೆಟ್ ನಿಯಮ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌’ ಎಂಬ ನಿಯಮವನ್ನು ಕಾಂಗ್ರೆಸ್‌ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಒಂದೇ ಕುಟುಂಬದ ಎರಡನೇ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ‘ಅಸಾಧಾರಣ ರೀತಿ’ಯಲ್ಲಿ ಕೆಲಸ ಮಾಡಿದ್ದರೆ ಅಂಥವರಿಗೆ ಈ ನಿಯಮದಿಂದ ವಿನಾಯಿತಿ ಇದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಚಿಂತನ ಶಿಬಿರದಲ್ಲಿ ಈ ಪ್ರಸ್ತಾವವನ್ನು ಶುಕ್ರವಾರ ಮುಂದಿಡಲಾಗಿದೆ. 

ನಿಯಮಕ್ಕೆ ಕಾಂಗ್ರೆಸ್‌ನಲ್ಲಿ ಸಂಪೂರ್ಣ ಸಹಮತವಿದೆ. ಚಿಂತನ ಶಿಬಿರದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳಾಗಲಿವೆ,’ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೆನ್ ಶಿಬಿರ ಆರಂಭಕ್ಕೂ ಮೊದಲು ತಿಳಿಸಿದ್ದರು.

ಪಕ್ಷದಲ್ಲಿ ಕನಿಷ್ಠ ಐದು ವರ್ಷವಾದರೂ ಕೆಲಸ ಮಾಡದ ನಾಯಕರ ಕುಟುಂಬ ಸದಸ್ಯರಿಗೆ, ಸಂಬಂಧಿಗಳಿಗೆ ಟಿಕೆಟ್‌ ನೀಡಬಾರದು ಎಂಬ ಪ್ರಸ್ತಾವದ ಬಗ್ಗೆ ಪಕ್ಷದಲ್ಲಿ ಸಹಮತವಿದೆ ಎಂದು ಮಾಕೆನ್‌ ತಿಳಿಸಿದ್ದರು. ಅದರಂತೆ ಕಾಂಗ್ರೆಸ್‌ ಈ ನಿಯಮವನ್ನು ಒಪ್ಪಿರುವುದಾಗಿ ಸುದ್ದಿ ಮಾಧ್ಯಮ ಎನ್‌ಡಿಟಿವಿ ವರದಿ ಪ್ರಕಟಿಸಿದೆ.

‘ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿರುವವರು ಸ್ಥಾನ ತೊರೆಯಬೇಕಾಗುತ್ತದೆ. ಮತ್ತೆ ಅದೇ ಹುದ್ದೆಗೆ ಬರಬೇಕಿದ್ದರೆ ಅವರು ಮೂರು ವರ್ಷ ಕಾಯಬೇಕಾಗುತ್ತದೆ‘ ಎಂದು ಅವರು ಮಾಹಿತಿ ನೀಡಿದರು.

ಓದಿ... ಬಾಲಿವುಡ್‌ಗೆ ನನ್ನನ್ನು ಭರಿಸಲಾಗದು: ಮಹೇಶ್ ಬಾಬು ಹೇಳಿಕೆಗೆ ಕಂಗನಾ ಪ್ರತಿಕ್ರಿಯೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು