ಸೋಮವಾರ, ಮೇ 23, 2022
30 °C

ಅಂಬೇಡ್ಕರ್‌ ಬದುಕಿದ್ದಾಗ, ಮರಣಾನಂತರವೂ ಕಾಂಗ್ರೆಸ್‌ ಅವರನ್ನು ಅವಮಾನಿಸಿದೆ: ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪುಣೆ: ಬಿ.ಆರ್‌.ಅಂಬೇಡ್ಕರ್ ಅವರು ಬದುಕಿದ್ದಾಗ ಕಾಂಗ್ರೆಸ್‌ ಪಕ್ಷ ಅವರನ್ನು ಅವಮಾನಿಸಿತ್ತು. ಮರಣ ಹೊಂದಿದ ನಂತರವೂ ಅವರನ್ನು ಅವಮಾನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಆರೋಪಿಸಿದರು.

ಪುಣೆ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಕಚೇರಿ ಆವರಣದಲ್ಲಿ ಅಂಬೇಡ್ಕರ್‌ ಅವರ ಪ್ರತಿಮೆಯನ್ನು ಸಹ ಅನಾವರಣಗೊಳಿಸಿದರು.

‘ಅಂಬೇಡ್ಕರ್‌ ಅವರು ಬದುಕಿದ್ದಾಗ ಆಗಲಿ, ಮರಣಾನಂತರವಾಗಲಿ ಸಿಕ್ಕ ಪ್ರತಿ ಸಂದರ್ಭದಲ್ಲಿಯೂ ಕಾಂಗ್ರೆಸ್‌ ಪಕ್ಷ ಅವರನ್ನು ಅಮಾನಿಸಿದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರೇ ‘ಸಂವಿಧಾನ ದಿನ’ ಆಚರಣೆಗೆ ಕ್ರಮ ಕೈಗೊಂಡರು. ಅಂಬೇಡ್ಕರ್‌ ಅವರ ಜೀವನ–ಸಾಧನೆಗೆ ಸಂಬಂಧ ಹೊಂದಿರುವ ಐದು ಸ್ಥಳಗಳನ್ನು ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ‘ಸ್ಮೃತಿ ಸ್ಥಳ’ಗಳನ್ನಾಗಿ ಪರಿವರ್ತಿಸಲಾಗಿದೆ. ಅಂಬೇಡ್ಕರ್‌ ಅವರಿಗೆ ಮರಣೋತ್ತರವಾಗಿ ಭಾರತರತ್ನ ಗೌರವ ನೀಡಿರುವುದು ಸಹ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆಯೇ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು