ಮಂಗಳವಾರ, ಅಕ್ಟೋಬರ್ 26, 2021
20 °C

ಛತ್ತೀಸಗಡದಲ್ಲಿ ನಾಯಕತ್ವ ಬದಲಾವಣೆ ವಿರೋಧಿಸಿ ದೆಹಲಿಗೆ ಬಘೇಲ್‌ ಆಪ್ತರ ದಂಡು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಛತ್ತೀಸಗಡದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿರುವ ನಡುವೆಯೇ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರ ಮತ್ತಷ್ಟು ಆಪ್ತ ಶಾಸಕರು ದೆಹಲಿ ತಲುಪಿದ್ದಾರೆ.

ಬಘೇಲ್‌ ಅವರ ಬದಲಾವಣೆಗೆ ಈ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್‌ನಲ್ಲಿ ಅಮರಿಂದರ್‌ ಸಿಂಗ್‌ ಅವರ ಬದಲಾವಣೆಯ ಬೆನ್ನಲ್ಲೇ ನಡೆಯುತ್ತಿರುವ ಛತ್ತೀಸಗಡದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್‌ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

2018ರ ಡಿಸೆಂಬರ್‌ನಲ್ಲಿ ಭೂಪೇಶ್‌ ಬಘೇಲ್‌ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಎರಡೂವರೆ ವರ್ಷಗಳಿಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಸ್ತಾಪ ಮುಂದಿಡಲಾಗಿತ್ತು ಹಾಗೂ ಆ ಪ್ರಕಾರವಾಗಿ ಪ್ರಸ್ತುತ ಆರೋಗ್ಯ ಸಚಿವರಾಗಿರುವ ಟಿ.ಎಸ್‌.ಸಿಂಗ್ ದೇವ್‌ ದ್ವಿತಿಯಾರ್ಧದ ಹೊಣೆ ಹೊರಬೇಕಾಗುತ್ತದೆ.

ಟಿ.ಎಸ್‌.ಸಿಂಗ್ ದೇವ್‌ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಕಾತುರರಾಗಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನ ಹೊರತಾಗಿ ಯಾವುದೇ ಸ್ಥಾನವನ್ನು ಪರಿಗಣಿಸಲೂ ಸಿದ್ಧರಿಲ್ಲ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು