ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಬೆಲೆ ಏರಿಕೆ: ಕೇಂದ್ರದಿಂದ ಸಾಮಾನ್ಯ ಜನರ ಲೂಟಿ ಎಂದ ಕಾಂಗ್ರೆಸ್-ಎನ್‌ಸಿಪಿ

Last Updated 6 ಏಪ್ರಿಲ್ 2022, 8:38 IST
ಅಕ್ಷರ ಗಾತ್ರ

ಮುಂಬೈ: ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ಮೂಲಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ಆರೋಪಿಸಿವೆ.

ಬುಧವಾರವಷ್ಟೇ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ 80 ಪೈಸೆ ಏರಿಕೆಯಾಗಿದ್ದು, ಕಳೆದ 16 ದಿನಗಳಲ್ಲಿ ಸುಮಾರು ಪ್ರತಿ ಲೀಟರ್‌ಗೆ ₹ 10 ಏರಿಕೆಯಾಗಿದೆ.

ಬೆಲೆ ಏರಿಕೆ ಮೂಲಕ ಮೋದಿ ಸರ್ಕಾರವು ಬಡವರ ಲೂಟಿ ಮಾಡುವುದನ್ನು ಮುಂದುವರಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ 80 ಪೈಸೆ ಏರಿಕೆಯಾಗಿದೆ. ಎರಡು ವಾರಗಳಲ್ಲಿ ಇದು ₹ 10 ಏರಿಕೆಯಾದಂತಾಗಿದೆ' ಎಂದು ಮಹಾರಾಷ್ಟ್ರದ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಬಿಜೆಪಿ ಸರ್ಕಾರ 'ಜೇಬುಗಳ್ಳ' ಎಂದಿದ್ದಾರೆ.

ಕಾರ್ಟೂನ್ ಹಂಚಿಕೊಂಡಿರುವ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ಕೇಸರಿ ಪಕ್ಷವು ಲೂಟ್ ಜೀವಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಭಾಗವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT