ಸೋಮವಾರ, ಸೆಪ್ಟೆಂಬರ್ 27, 2021
28 °C

ಸಮಸ್ಯೆಗಳ ಕುರಿತು ಆಂದೋಲನ: ಕಾಂಗ್ರೆಸ್ ಪಕ್ಷದ ಉನ್ನತ ಸಮಿತಿಯಲ್ಲಿ ಪ್ರಿಯಾಂಕಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani
ನವದೆಹಲಿ: ರಾಷ್ಟ್ರೀಯ ಸಮಸ್ಯೆಗಳ ಕುರಿತು ನಿರಂತರ ಆಂದೋಲನಗಳನ್ನು ನಡೆಸಲು ಕಾಂಗ್ರೆಸ್ ಪಕ್ಷವು ಪ್ರಿಯಾಂಕಾ ಗಾಂಧಿ ಜತೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ.
 
ಬಿಜೆಪಿಯ ಕಟು ಹಿಂದುತ್ವ ರಾಜಕಾರಣದ ಟೀಕಾಕಾರರಾದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
 
ಪ್ರಿಯಾಂಕಾ ಹೊರತುಪಡಿಸಿ, ಒಂಬತ್ತು ಸದಸ್ಯರ ಸಮಿತಿಯಲ್ಲಿ ಸಂಸದ ಉತ್ತಮ್ ಕುಮಾರ್ ರೆಡ್ಡಿ, ರಾಜ್ಯಸಭಾ ಸಂಸದ ರಿಪುನ್ ಬೋರಾ, ಮನೀಶ್ ಚತ್ರಥ, ಬಿ.ಕೆ ಹರಿಪ್ರಸಾದ್, ಉದಿತ್ ರಾಜ್, ರಾಗಿಣಿ ನಾಯಕ್ ಮತ್ತು ಜುಬೇರ್ ಖಾನ್ ಇದ್ದಾರೆ.

ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲಿರುವ ಈ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕರಡು ರಚನೆಯು ಮಹತ್ವ ಪಡೆದುಕೊಂಡಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವ್ಯಾಪ್ತಿ ಮೀರಿದ ಸಮಸ್ಯೆಗಳನ್ನು ಅಧಿಕೃತವಾಗಿ ಕೈಗೆತ್ತಿಕೊಳ್ಳುತ್ತಿದ್ದಾರೆ.

ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸರ್ಕಾರವು ಪ್ರತಿ ತಿಂಗಳು ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಮೂರು-ನಾಲ್ಕು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 60 ರಿಂದ 70 ಬಾರಿ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದರು.

19 ರಾಜಕೀಯ ಪಕ್ಷಗಳ ನಾಯಕರು ಸೆಪ್ಟೆಂಬರ್ 20ರಿಂದ 30 ರವರೆಗೆ ದೇಶದಾದ್ಯಂತ ಜಂಟಿಯಾಗಿ ಪ್ರತಿಭಟನೆ ಆಯೋಜಿಸುವುದಾಗಿ ಆ.20 ರಂದು ಘೋಷಿಸಿದ ನಂತರ ಈ ಸಮಿತಿ ರಚಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು