ಕಾಂಗ್ರೆಸ್ ನಾಯಕರು ಶ್ರೀ ರಾಮನಿಗೆ ಅವಮಾನ ಮಾಡಿದ್ದಾರೆ: ಅಮಿತ್ ಶಾ

ನವದೆಹಲಿ: ಕಪ್ಪು ಬಟ್ಟೆ ಧರಿಸುವ ಮೂಲಕ ಕಾಂಗ್ರೆಸ್ ನಾಯಕರು ಶ್ರೀ ರಾಮನಿಗೆ ಅವಮಾನ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರು ಇದೇ ದಿನ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಅದೇ ದಿನವನ್ನು ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಒಂದು ಧರ್ಮದವರನ್ನು ಓಲೈಸುತ್ತಿದೆ. ಇದರಿಂದ ಶ್ರೀ ರಾಮನಿಗೆ ಅವಮಾನವಾಗಿದೆ’ ಎಂದು ಶಾ ಆರೋಪಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.