ಶುಕ್ರವಾರ, ಏಪ್ರಿಲ್ 23, 2021
28 °C

ವಂಶಪರಂಪರೆ ರಾಜಕೀಯದಿಂದ ಕಾಂಗ್ರೆಸ್‌ ಪತನದತ್ತ: ಅಮಿತ್‌ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಾರೈಕಲ್‌/ಚೆನ್ನೈ : ಕಾಂಗ್ರೆಸ್‌ನ ಹಿರಿಯ ಮುಖಂಡರೆಲ್ಲ ಬಿಜೆಪಿ ಸೇರುತ್ತಿದ್ದಾರೆ. ವಂಶಾಡಳಿತ ಮತ್ತು ಒಂದು ಕುಟುಂಬದಿಂದಾಗಿ ಕಾಂಗ್ರೆಸ್‌ ಪಕ್ಷವು ‍ಪುದುಚೇರಿಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕುಸಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಹೇಳಿದ್ದಾರೆ. 

ತಮಿಳುನಾಡಿನ ವಿಲ್ಲುಪುರಂನಲ್ಲಿಯೂ ಶಾ ಅವರು ವಂಶಾಡಳಿತದ ವಿಚಾರವನ್ನೇ ಪ್ರಸ್ತಾಪಿಸಿದರು. ‘ಡಿಎಂಕೆ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಕುಟುಂಬಗಳ ಬಗ್ಗೆಯಷ್ಟೇ ಯೋಚಿಸುತ್ತಾರೆ. ಮಗ ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡುವುದಷ್ಟೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬೇಕಾಗಿದೆ. ಮಗ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್‌ ಬಯಕೆ’ ಎಂದು ಶಾ ಹೇಳಿದ್ದಾರೆ.  

ಮೀನುಗಾರಿಕಗೆ ಪ್ರತ್ಯೇಕ ಸಚಿವಾಲಯ ಇಲ್ಲ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಹೇಳಿದ್ದನ್ನೂ ಶಾ ಅವರು ಲೇವಡಿ ಮಾಡಿದರು. ‘ಕೆಲ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ರಾಹುಲ್ ಅವರು ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಏಕಿಲ್ಲ ಎಂದು ಪ್ರಶ್ನಿಸಿದ್ದರು. ರಾಹುಲ್‌ ಅವರೇ, ನೀವು ಆಗ ರಜೆಯಲ್ಲಿದ್ದೀರಿ. ಮೋದಿ ಅವರು 2019ರಲ್ಲಿಯೇ ಎರಡು ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಿದ್ದಾರೆ. ಅದು ನಿಮ್ಮ ಅರಿವಿಗೆ ಬಂದಿಲ್ಲ’ ಎಂದರು. 

ತಮಿಳು ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗದ್ದಕ್ಕೆ ಶಾ ಅವರು ವಿಷಾದವನ್ನೂ ವ್ಯಕ್ತಪಡಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು