ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹6 ಸಾವಿರ ಆಮಿಷ: ರಮೇಶ್ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ದೂರು ನೀಡಿದರೂ ಕ್ರಮ ಕೈಗೊಳ್ಳದ ಆಯೋಗ, ಪೊಲೀಸರು: ಆರೋಪ
Last Updated 7 ಫೆಬ್ರುವರಿ 2023, 21:17 IST
ಅಕ್ಷರ ಗಾತ್ರ

ನವದೆಹಲಿ: ಮತದಾರರಿಗೆ ತಲಾ ₹6 ಸಾವಿರ ನೀಡುವುದಾಗಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕ್ರಮಕೈಗೊಳ್ಳು ವಂತೆ ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದ ನಿಯೋಗವು ಮಂಗಳವಾರ ದೂರು ನೀಡಿದೆ.

‘ಮುಂಬರುವ ಚುನಾವಣೆಯಲ್ಲಿ ಮತದಾರರಿಗೆ ತಲಾ ₹ 6 ಸಾವಿರ ನೀಡಿ ಮತ ಕೇಳಲಾಗುವುದು. ಎದುರಾ
ಳಿಗಿಂತ ₹ 10 ಕೋಟಿ ಹೆಚ್ಚು ಖರ್ಚು ಮಾಡಲು ನಾವು ಸಿದ್ಧರಿದ್ದೇವೆ’ ಎಂಬ ಹೇಳಿಕೆ ನೀಡಿರುವ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಜ. 25ರಂದು ದೂರು ನೀಡಿತ್ತು. ಆಯೋಗಕ್ಕೂ ದೂರು ನೀಡಿತ್ತು. ಆದರೆ, ಆಯೋಗದ ಅಧಿಕಾರಿಗಳು, ಪೊಲೀಸರು ಈವರೆಗೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಆಮಿಷ ಒಡ್ಡಿ ರಾಜ್ಯದ 5 ಕೋಟಿ ಮತದಾರರನ್ನು ಖರೀದಿಸುವ ಸಂಚು ನಡೆಸಿರುವ ರಮೇಶ ಜಾರಕಿಹೊಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರೇರಣೆ ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ದೂರಿನಲ್ಲಿ ನಿಯೋಗ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT