ಭಾನುವಾರ, ಸೆಪ್ಟೆಂಬರ್ 19, 2021
30 °C

75ನೇ ವರ್ಷದ ಸ್ವಾತಂತ್ರ್ಯೋತ್ಸವ: ಮನಮೋಹನ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯೋತ್ಸವದ ವರ್ಷಾಚರಣೆಯನ್ನು ಆಯೋಜಿಸಲು ಮತ್ತು ಸಂಘಟಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ 11 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.

ಮನಮೋಹನ್ ಸಿಂಗ್ ಸಮಿತಿಯ ಅಧ್ಯಕ್ಷರಾಗಿದ್ದರೆ, ಕೇಂದ್ರದ ಮಾಜಿ ರಕ್ಷಣಾ ಸಚಿವ ಎ.ಕೆ.ಆ್ಯಟನಿ ಮತ್ತು ಮಾಜಿ ಸ್ಪೀಕರ್ ಮೀರಾ ಕುಮಾರ್ ಮತ್ತು ಪಕ್ಷದ ಹಿರಿಯ ನಾಯಕರಾದ ಅಂಬಿಕಾ ಸೋನಿ ಮತ್ತು ಗುಲಾಂ ನಬಿ ಆಜಾದ್ ಸಮಿತಿಯಲ್ಲಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಸಮಿತಿಯ ಸಂಚಾಲಕರಾಗಿರುತ್ತಾರೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಪಕ್ಷದ ನಾಯಕರಾದ ಪ್ರಮೋದ್ ತಿವಾರಿ, ಮುಲ್ಲಪ್ಪಳ್ಳಿ ರಾಮಚಂದ್ರನ್, ಕೆಆರ್ ರಮೇಶ್ ಕುಮಾರ್ ಮತ್ತು ಸಂಸದ ಪ್ರದ್ಯುತ್ ಬೋರ್ಡೊಲಾಯ್ ಸಮಿತಿಯ ಇತರ ಸದಸ್ಯರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು