ಸೋಮವಾರ, ಸೆಪ್ಟೆಂಬರ್ 20, 2021
23 °C

ಉತ್ತರ ಪ್ರದೇಶ: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌, ಚುನಾವಣಾ ಸಮಿತಿಯನ್ನು ರಚಿಸಿದೆ.

ಉತ್ತರ ಪ್ರದೇಶ ಘಟಕದ ಅಧ್ಯಕ್ಷ  ಅಜಯ್‌ ಕುಮಾರ್‌ ಲಲ್ಲು, ಕೇಂದ್ರದ ಮಾಜಿ ಸಚಿವರಾದ ಸಲ್ಮಾನ್‌ ಖುರ್ಷಿದ್‌, ರಾಜೀವ್‌ ಶುಕ್ಲಾ ಮತ್ತು ಆರ್‌.ಪಿ.ಎನ್‌. ಸಿಂಗ್‌ ಸಮಿತಿಯಲ್ಲಿರುವ ಪ್ರಮುಖರು.

38 ಸದಸ್ಯರ ಸಮಿತಿಯು ಇದಾಗಿದೆ. ವಿವಿಧ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಸಮಿತಿಯಲ್ಲಿ ಸೇರಿಸಲಾಗಿದೆ.

‘ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಪ್ರಿಯಾಂಕಾ ಗಾಂಧಿ ಅವರ ಉಸ್ತುವಾರಿಯಲ್ಲಿ ಎದುರಿಸಲಿದ್ದೇವೆ. ಮೂರು ದಶಕಗಳ ಬಳಿಕ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ನಿಶ್ಚಿತ’ ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಲಲ್ಲು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು