ಸೋಮವಾರ, ಅಕ್ಟೋಬರ್ 18, 2021
23 °C

ರಾಜಕೀಯ, ಚುನಾವಣೆ ಸಿದ್ಧತೆ: ಅ.16ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇದೇ 16ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ, ಪಕ್ಷದ ಆಂತರಿಕ ವಿದ್ಯಮಾನಗಳು ಮತ್ತು ಮುಂಬರುವ ವಿಧಾನಸಭೆ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ ಎಂದು ‘ಎಎನ್‌ಐ’ ವರದಿ ಮಾಡಿದೆ.

ಓದಿ: 

ಪಕ್ಷವು ಈ ತಿಂಗಳು ಸಭೆ ಕರೆಯುವ ಸಾಧ್ಯತೆ ಇದೆ ಎಂದು ಕೆಲವು ದಿನಗಳ ಹಿಂದೆ ಮೂಲಗಳು ತಿಳಿಸಿದ್ದವು. ಪಕ್ಷದೊಳಗಿನ ಭಿನ್ನಮತ, ಪ್ರಮುಖ ನಾಯಕರು ಪಕ್ಷ ತ್ಯಜಿಸುತ್ತಿರುವ ಬಗ್ಗೆ ಸಭೆ ಕರೆದು ಚರ್ಚಿಸಬೇಕು ಎಂದು ‘ಜಿ–23’ರ ಮುಖಂಡರು ಸೇರಿದಂತೆ ಅನೇಕ ನಾಯಕರು ಇತ್ತೀಚೆಗೆ ಆಗ್ರಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು