ಸೋಮವಾರ, ಅಕ್ಟೋಬರ್ 18, 2021
23 °C

ಲಖಿಂಪುರ ಹಿಂಸಾಚಾರ: ದೇಶದಾದ್ಯಂತ ಮೌನ ವ್ರತಕ್ಕೆ ಕಾಂಗ್ರೆಸ್‌ ನಿರ್ಧಾರ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರನ್ನು ತಕ್ಷಣವೇ ಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ದೇಶದಾದ್ಯಂತ ಸೋಮವಾರ ಮೌನ ವ್ರತ ಆಚರಣೆ ಮಾಡಲಿದೆ.

ಸೋಮವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಜಭವನ ಅಥವಾ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಮೌನ ವ್ರತ ಆಚರಿಸುವಂತೆ ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರಿಗೆ ಕಾಂಗ್ರೆಸ್‌ ಸೂಚನೆ ನೀಡಿದೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಚಿವ ಅಜಯ್‌ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಅವರ ಮಗ ಸೇರಿದಂತೆ ಎಲ್ಲ ಆರೋಪಿಗಳನ್ನೂ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು